ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲ್ಕತ್ತ | ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ BJP ಮುಖಂಡನ ಬಂಧನ

Published 23 ಫೆಬ್ರುವರಿ 2024, 18:41 IST
Last Updated 23 ಫೆಬ್ರುವರಿ 2024, 18:41 IST
ಅಕ್ಷರ ಗಾತ್ರ

ಹೌರಾ: ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಹೋಟೆಲ್‌ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಇತರ 10 ಮಂದಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಈ ಘಟನೆಯು ರಾಜಕೀಯ ಗದ್ದಲಕ್ಕೆ ಕಾರಣವಾಗಿದ್ದು, ಬಿಜೆಪಿಯು ಲೈಂಗಿಕ ದಂಧೆಯಲ್ಲಿ ತೊಡಗಿರುವ ನಾಯಕರನ್ನು ರಕ್ಷಿಸುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ. ಸಂದೇಶಖಾಲಿ ಘಟನೆಯಿಂದ ಜನರ ಗಮನ ಬೇರೆಡೆ ಸೆಳೆಯಲು ಆಡಳಿತ ಪಕ್ಷವು ಯತ್ನಿಸುತ್ತಿದೆ ಎಂದು ಕೇಸರಿ ಪಾಳಯ ಹೇಳಿದೆ. 

ಗುರುವಾರ ಸಂಜೆ ಸಂಕ್ರೈಲ್ ಪ್ರದೇಶದ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದ ಸಂದರಭದಲ್ಲಿ ಬಿಜೆಪಿ ಮುಖಂಡ ಸವ್ಯಸಾಚಿ ಘೋಷ್‌ ಹಾಗೂ ಇತರ 10 ಜನರಲನ್ನು ಬಂಧಿಸಿದ್ದರು. ಬಿಜೆಪಿ ನಾಯಕನ ಒಡೆತನದ ಹೋಟೆಲಿನಿಂದ ಹಲವು ಮಹಿಳೆಯರು ಹಾಗೂ ಬಾಲಕಿಯರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 116 ಬಳಿ ಇರುವ ಹೋಟೆಲ್‌ನಲ್ಲಿ ವೇಶ್ಯಾವಾಟಿಕೆ ನಡೆಸಲು ಮಹಿಳೆಯರನ್ನು ಕರೆತರಲಾಗಿತ್ತು. ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ಘೋಷ್ ಹಾಗೂ ಇನ್ನೊಬ್ಬ ಆರೋಪಿಯನ್ನು ಏಳು ದಿನಗಳ ಪೊಲೀಸ್ ವಶಕ್ಕೆ ನ್ಯಾಯಾಲಯ ಒಪ್ಪಿಸಿದೆ ಎಂದಿದ್ದಾರೆ.

ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ಟಿಎಂಸಿ ರಾಜ್ಯ ಯುವ ಘಟಕದ ಅಧ್ಯಕ್ಷೆ ಸಯಾನಿ ಘೋಷ್, 'ಮಮತಾ ಬ್ಯಾನರ್ಜಿ ಅವರ ವರ್ಚಸ್ಸಿಗೆ ಧಕ್ಕೆ ತರಲು ಬಿಜೆಪಿ ಹೆಚ್ಚಾಗಿ ಕೆಲಸ ಮಾಡುತ್ತಿದೆ. ಅದೇ ಬಿಜೆಪಿಯ ಹೌರಾ ಕಿಸಾನ್ ಮೋರ್ಚಾ ಕಾರ್ಯದರ್ಶಿ ಸವ್ಯಸಾಚಿ ಘೋಷ್ ಅವರನ್ನು ಸಂಕ್ರೈಲ್‌ನ ಹೋಟೆಲ್‌ನಲ್ಲಿ ಅಪ್ರಾಪ್ತ ಬಾಲಕಿಯರನ್ನು ಒಳಗೊಂಡ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಕ್ಕಾಗಿ ಬಂಧಿಸಲಾಗಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT