ಕೋಲ್ಕತ್ತ: ಸ್ನಾತಕೋತ್ತರ ವೈದ್ಯಕೀಯ ಪದವಿಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ನಡೆದ ಪಶ್ಚಿಮ ಬಂಗಾಳದ ಕೋಲ್ಕತ್ತದಲ್ಲಿರುವ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಮಾಜಿ ಪ್ರಾಚಾರ್ಯ ಸಂದೀಪ್ ಘೋಷ್ ಅವರಿಗೆ ಕಲ್ಕತ್ತ ಹೈಕೋರ್ಟ್ ಜಾಮೀನು ನೀಡಿದೆ.

ವೈದ್ಯ ವಿದ್ಯಾರ್ಥಿನನಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಸಾಕ್ಷ್ಯಾಧಾರ ನಾಶ ಆರೋಪದ ಮೇಲೆ ಇವರನ್ನು ಬಂಧಿಸಲಾಗಿತ್ತು. ಪ್ರಕರಣದಲ್ಲಿ ತಲಾ ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿ ಅಭಿಜಿತ್ ಮೊಂಡಲ್ ಅವರನ್ನೂ ಸಿಬಿಐ ಬಂಧಿಸಿತ್ತು. ಎಫ್ಐಆರ್ ದಾಖಲಿಸಲು ವಿಳಂಬ, ಸಾಕ್ಷ್ಯ ನಾಶ ಮತ್ತು ಪ್ರಕರಣದ ದಾರಿ ತಪ್ಪಿಸಿದ ಆರೋಪ ಇವರ ಮೇಲಿದೆ.

ಆರ್.ಜಿ. ಕರ್ ಕಾಲೇಜಿನ ಸಭಾಂಗಣದಲ್ಲಿ ಆ.9ರಂದು ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಅತ್ಯಾಚಾರ ಮತ್ತು ಆಕೆಯ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ, ಕಾಲೇಜಿನಲ್ಲಿ ಹಣಕಾಸು ಅವ್ಯವಹಾರ ನಡೆದಿರುವ ಆರೋಪವು ಕೇಳಿ ಬಂದಿತ್ತು. ಈ ಆರೋಪದ ಮೇಲೆ ಸೆಪ್ಟೆಂಬರ್ 2 ರಂದು ಘೋಷ್ ಅವರನ್ನು ಸಿಬಿಐ ಬಂಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.