ಕೋಲ್ಕತಾ:ನಟಿ, ತೃಣಮೂಲ ಕಾಂಗ್ರೆಸ್ ಸಂಸದೆ ಮಿಮಿ ಚಕ್ರವರ್ತಿ ಕೋವಿಡ್ ಲಸಿಕೆ ಪಡೆದ ಕೇಂದ್ರವನ್ನು ನಿರ್ವಹಿಸುತ್ತಿದ್ದ ನಕಲಿ ಐಎಎಸ್ ಅಧಿಕಾರಿಯನ್ನು ಬಂಧಿಸಲಾಗಿದೆ. ಕೋಲ್ಕತಾದ ಕಸಬಾ ಪ್ರದೇಶದಲ್ಲಿ ಐಎಎಸ್ ಅಧಿಕಾರಿಯ ಸೋಗಿನಲ್ಲಿ ಲಸಿಕಾ ಕೇಂದ್ರ ತೆರೆದಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕೋಲ್ಕತದ ಮಹಾನಗರ ಪಾಲಿಕೆಯ ಸಹ ಆಯುಕ್ತ ಎಂದು ಪರಿಚಯಿಸಿಕೊಂಡಿದ್ದ ದೇವಂಜನ್ ದೇವ್ ಎಂಬ ವ್ಯಕ್ತಿ ಉಚಿತವಾಗಿ ಕೋವಿಡ್ ಲಸಿಕೆಯನ್ನು ನೀಡುವ ಕೇಂದ್ರವನ್ನು ತೆರೆದಿದ್ದ ಎಂದು ಕೋಲ್ಕತಾದ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.