ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಬ್ಯಾಂಕ್ ವಂಚನೆ: ಇ.ಡಿಯಿಂದ ದಾಳಿ

Published 28 ಮೇ 2024, 14:14 IST
Last Updated 28 ಮೇ 2024, 14:14 IST
ಅಕ್ಷರ ಗಾತ್ರ

ಕೋಲ್ಕತ್ತ: ಪಟ್ನಾದ ಬ್ಯಾಂಕೊಂದರಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪಶ್ಚಿಮ ಬಂಗಾಳದ ಕೋಲ್ಕತ್ತದ ಕೆಲ ಪ್ರದೇಶಗಳಲ್ಲಿ ಮಂಗಳವಾರ ಶೋಧ ಕಾರ್ಯ ನಡೆಸಿದರು.

ಅಲ್ಲಿಯ ಸ್ಥಳೀಯ ಉದ್ಯಮಿಗಳಿಗೆ ಮತ್ತು ರಾಜರ್‌ಹಾಟ್‌ ಪ್ರದೇಶದಲ್ಲಿಯ ಖಾಸಗಿ ಸಂಸ್ಥೆಯ ಹಿರಿಯ ಅಧಿಕಾರಿಗಳಿಗೆ ಸೇರಿದ ಸ್ವತ್ತುಗಳ ಮೇಲೆ ದಾಳಿ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇ.ಡಿ ಜೊತೆ ಇತರ ಕೇಂದ್ರೀಯ ಸಂಸ್ಥೆಗಳೂ ಭಾಗಿಯಾಗಿದ್ದವು. ಆ ಅಧಿಕಾರಿಗಳು ಮತ್ತು ಉದ್ಯಮಿಗಳು ಬ್ಯಾಂಕ್‌ ವಂಚನೆಯಲ್ಲಿ ಶಾಮೀಲಾಗಿದ್ದಾರೆ ಎಂಬ ಅನುಮಾನದ ಮೇರೆಗೆ ದಾಳಿ ನಡೆಸಲಾಗಿದೆ ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT