ಕೋಲ್ಕತ್ತ: ಪಶ್ಚಿಮ ಬಂಗಾಳದ ಕೋಲ್ಕತ್ತದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಘಟನೆ ನಡೆದ ಕೆಲವೇ ದಿನಗಳಲ್ಲಿ ಅಂಥದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ಕೋಲ್ಕತ್ತದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆಯ ಸಹಪಾಠಿಯನ್ನು ಆನಂದಪುರ ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ.

‘ಆನಂದಪುರ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದೇನೆ. ಸಹಪಾಠಿಯೊಬ್ಬ ಮದ್ಯದಲ್ಲಿ ಮಾದಕ ದ್ರವ್ಯ ಬೆರೆಸಿ ಕುಡಿಸಿದ. ಇದಾದ ಕೆಲವೇ ಕ್ಷಣಗಳಲ್ಲಿ ನಾನು ಪ್ರಜ್ಞೆ ಕಳೆದುಕೊಂಡೆ. ಆ ನಂತರ ಅತ್ಯಾಚಾರ ಎಸಗಿದ್ದಾನೆ’ ಎಂದು ಯುವತಿ ದೂರಿನಲ್ಲಿ ಹೇಳಿದ್ದಾರೆ.
.ಕೋಲ್ಕತ್ತ ಅತ್ಯಾಚಾರ ಪ್ರಕರಣ: ಆರೋಪಿ ಪಾತ್ರ ದೃಢಪಡಿಸಿದ DNA ಸಾಕ್ಷ್ಯ.ಕೋಲ್ಕತ್ತ ಸಾಮೂಹಿಕ ಅತ್ಯಾಚಾರ ಪ್ರಕರಣ: ಕ್ಯಾಂಪಸ್ ಭದ್ರತೆಗೆ ಸೇನಾ ಸಿಬ್ಬಂದಿ.
ಯುವತಿ ವಿದ್ಯಾರ್ಜನೆಗಾಗಿ ಪಶ್ಚಿಮ ಬಂಗಾಳಕ್ಕೆ ಬಂದಿದ್ದಾರೆ ಎಂದಿರುವ ಪೊಲಿಸರು, ಅವರು ಯಾವ ರಾಜ್ಯಕ್ಕೆ ಸೇರಿದವರು ಎಂಬುದನ್ನು ಬಹಿರಂಗಪಡಿಸಿಲ್ಲ.

ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಕ್ಯಾಂಪಸ್ನಿಂದ ಹೊರಗೆ ಹೋದಾಗ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಘಟನೆ ಕೆಲ ದಿನಗಳ ಹಿಂದೆ ವರದಿಯಾಗಿತ್ತು.

‘ಕೃತ್ಯದ ನಂತರ ಆರೋಪಿಯು ತಲೆಮರೆಸಿಕೊಂಡಿದ್ದ. ಆನಂದಪುರದಲ್ಲಿರುವ ತನ್ನ ಮನೆಗೆ ಬರುವ ಖಚಿತ ಮಾಹಿತಿ ಆಧರಿಸಿ ಬಂಧಿಸಲಾಗಿದೆ. ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಈತನನ್ನು ಅ. 22ರವರೆಗೆ ಪೊಲೀಸ್ ವಶಕ್ಕೆ ನ್ಯಾಯಾಲಯ ನೀಡಿದೆ’ ಎಂದು ಆನಂದಪುರ ಠಾಣೆ ಪೊಲೀಸರು ಹೇಳಿದ್ದಾರೆ.

‘ತನಿಖೆ ಆರಂಭಿಸಲಾಗಿದೆ. ಶೀಘ್ರದಲ್ಲಿ ಅದರ ವರದಿಯನ್ನು ನೀಡಲಾಗುವುದು’ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
.ಸಂಪಾದಕೀಯ | ಅತ್ಯಾಚಾರ ಹೇಯಕೃತ್ಯ: ರಾಜಕೀಯ ಬೇಡ, ಅಪರಾಧಿಗಳನ್ನು ಮಟ್ಟ ಹಾಕಿ.ಪಶ್ಚಿಮ ಬಂಗಾಳದ ದುರ್ಗಾಪುರ ಸಾಮೂಹಿಕ ಅತ್ಯಾಚಾರ ಆರೋಪ: ಘಟನೆ ಮರುಸೃಷ್ಟಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.