ಕೋಲ್ಕತ್ತ: ಕಸ್ಬಾ ಕಾನೂನು ಕಾಲೇಜಿನಲ್ಲಿ ಮಗಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿರುವ ದೂರನ್ನು ಹಿಂಪಡೆಯುವಂತೆ ಅನಾಮಧೇಯರಿಬ್ಬರು ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆಯ ತಂದೆ ದೂರು ನೀಡಿದ್ದಾರೆ.

ಬೆದರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಬರೂಯಿಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ಆರಂಭಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದೂರು ಹಿಂಪಡೆಯಲು ಹೇಳಿ ಬೆದರಿಸಿದರು’ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ದಕ್ಷಿಣ ಕೊಲ್ಕತ್ತದ ಕಾನೂನು ಕಾಲೇಜಿನಲ್ಲಿ ಜೂನ್ 25ರಂದು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪ್ರಥಮ ವರ್ಷದ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ಸಂಬಂಧ ನಾಲ್ವರು ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ. ಆರೋಪಿಗಳೆಲ್ಲರೂ ಸದ್ಯ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.