‘ಶೌಚಾಲಯದ ಬಾಗಿಲಿನ ಬಳಿ ತನ್ನ ವಿಡಿಯೊವನ್ನು ಚಿತ್ರೀಕರಿಸುತ್ತಿರುವ ವೇಳೆ ಇತರೆ ಮಹಿಳಾ ಸಿಬ್ಬಂದಿ ಆರೋಪಿಯನ್ನು ಹಿಡಿದಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ’ ಎಂದು ಪೊಲೀಸರು ಮಂಗಳವಾರ ಮಾಹಿತಿ ನೀಡಿದ್ದಾರೆ.
ಆರೋಪಿಯನ್ನು ಹರೇ ಸ್ಟ್ರೀಟ್ ಠಾಣಾ ಪೊಲೀಸರು ಬಂಧಿಸಿದ್ದು, ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.