ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಲ್ಕತ್ತ | ಬಾಲಕಿ ಮೇಲೆ ಅತ್ಯಾಚಾರ, ಹತ್ಯೆ: ಅಪರಾಧಿಗೆ ಮರಣ ದಂಡನೆ

Published : 26 ಸೆಪ್ಟೆಂಬರ್ 2024, 13:26 IST
Last Updated : 26 ಸೆಪ್ಟೆಂಬರ್ 2024, 13:26 IST
ಫಾಲೋ ಮಾಡಿ
Comments

ಕೋಲ್ಕತ್ತ: ಕಳೆದ ವರ್ಷ ಏಳು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆಗೈದಿದ್ದ ಅಪರಾಧಿಗೆ ಕೋಲ್ಕತ್ತ ನ್ಯಾಯಾಲಯ ಮರಣದಂಡನೆ ವಿಧಿಸಿ ಗುರುವಾರ ಆದೇಶಿಸಿದೆ. ಜತೆಗೆ, ಇದೊಂದು ತೀರಾ ಅಪರೂಪದ ಪ್ರಕರಣ ಎಂದು ಅಭಿಪ್ರಾಯಪಟ್ಟಿದೆ.

2023ರ ಮಾರ್ಚ್‌ 26ರಂದು ಇಲ್ಲಿನ ತಿಲಾಜಾಲಾ ಪ್ರದೇಶದ ತನ್ನ ಮನೆಯಿಂದ ಹೊರಗೆ ಹೋಗಿದ್ದ ಬಾಲಕಿ ನಾಪತ್ತೆಯಾಗಿದ್ದಳು. ನಾಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದ ‍ಪೊಲೀಸರು, ತನಿಖೆ ನಡೆಸಿದ್ದರು. ಬಳಿಕ ಸಮೀಪದ ಫ್ಲಾಟ್‌ವೊಂದರಲ್ಲಿ ಆಕೆಯ ಶವ ಪತ್ತೆಯಾಗಿತ್ತು.

ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದು ಖಚಿತವಾಗುತ್ತಿದ್ದಂತೆ, ಫ್ಲಾಟ್‌ ನಿವಾಸಿಯನ್ನು ಬಂಧಿಸಲಾಗಿತ್ತು.

ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬಳಿಕ ಕತ್ತು ಹಿಸುಕಿ ಹತ್ಯೆ ಮಾಡಲಾಗಿದೆ. ಅಲ್ಲದೇ ಆಕೆಯ ದೇಹದ ಮೇಲೆ ಆಯುಧದಿಂದ ಹಲ್ಲೆ ಮಾಡಿದ ಗಾಯದ ಗುರುತುಗಳಿದ್ದವು ಎಂದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಹೇಳಲಾಗಿತ್ತು.

ಈ ಎಲ್ಲಾ ಕೃತ್ಯಗಳನ್ನು ಆರೋಪಿ ಎಸಗಿರುವುದು ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟ ಅಲಿಪೋರ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಸುದೀಪ್ತೋ ಭಟ್ಟಾಚಾರ್ಯ ಅವರು, ಅಪರಾಧಿ ಎಂದು ಘೋಷಿಸಿ ಮರಣದಂಡನೆ ವಿಧಿಸಿದರು.

ಏಳರ ಹರೆಯದ ಬಾಲಕಿಯು ತನ್ನನ್ನು ತಾನು ರಕ್ಷಿಸಿಕೊಳ್ಳಲಾಗದೆ ಘೋರ ಅಪರಾಧಕ್ಕೆ ತುತ್ತಾದಳು ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ಒಂದು ವರ್ಷದೊಳಗೆ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಲಾಯಿತು ಎಂದು ಸರ್ಕಾರಿ ವಕೀಲರಾದ ಮಾಧವಿ ಘೋಷ್ ಹೇಳಿದರು.

ರಾಜ್ಯದ ಸಂತ್ರಸ್ತ ಪರಿಹಾರ ಯೋಜನೆಯಡಿ ಮೃತ ಬಾಲಕಿಯ ತಾಯಿಗೆ ₹10 ಲಕ್ಷ ನೀಡುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT