ಗುರುವಾರ, 10 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಲ್ಕತ್ತದ ವೈದ್ಯ ವಿದ್ಯಾರ್ಥಿನಿ ಹತ್ಯೆ: ಮತ್ತೊಬ್ಬ ವೈದ್ಯನ ವಿಚಾರಣೆ

Published : 21 ಸೆಪ್ಟೆಂಬರ್ 2024, 15:59 IST
Last Updated : 21 ಸೆಪ್ಟೆಂಬರ್ 2024, 15:59 IST
ಫಾಲೋ ಮಾಡಿ
Comments

ಕೋಲ್ಕತ್ತ: ಇಲ್ಲಿ ನಡೆದಿದ್ದ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದಂತೆ ಈಗಾಗಲೇ ಬಂಧನದಲ್ಲಿರುವ ಆರ್‌.ಜಿ. ಕರ್‌ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ ಅವರಿಗೆ ಆಪ್ತರಾಗಿದ್ದ ವೈದ್ಯರೊಬ್ಬರ ವಿಚಾರಣೆಯನ್ನು ಶನಿವಾರ ಆರಂಭಿಸಲಾಗಿದೆ ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ಆರೋಗ್ಯ ಇಲಾಖೆಯು ವೈದ್ಯ ಬಿರುಪಾಕ್ಷ ಬಿಸ್ವಾಸ್‌ ಅವರನ್ನು ಈಚೆಗಷ್ಟೇ ಬುರ್ದ್ವಾನ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಿಂದ ದಕ್ಷಿಣ 24 ಪರಗಣ ಜಿಲ್ಲೆಯ ಕಕ್‌ದ್ವೀಪ್‌ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ವೈದ್ಯಕೀಯ ಕಾಲೇಜುಗಳಲ್ಲಿ ನಡೆವ ಅವ್ಯವಹಾರಗಳಲ್ಲಿ ಬಿಸ್ವಾಸ್‌ ಹೆಸರು ಈ ಹಿಂದೆ ಕೇಳಿಬಂದಿತ್ತು. ಮೃತ ಮಹಿಳೆಯ ದೇಹ ಪತ್ತೆಯಾದ ಆಗಸ್ಟ್‌ 9ರಂದು ಬಿಸ್ವಾಸ್‌ ಆರ್‌.ಜಿ. ಕರ್‌ ಆಸ್ಪತ್ರೆಯಲ್ಲಿದ್ದರು.

ಅಧಿಕೃತ ಕೆಲಸ ಇಲ್ಲದಿದ್ದರೂ ಕಾಲೇಜಿನಲ್ಲಿ ಕಾಣಿಸಿಕೊಂಡ ಕುರಿತು ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ವಿದ್ಯಾರ್ಥಿಗಳನ್ನು ಬೆದರಿಸಿದ ಆರೋಪದ ಮೇಲೆ ಈ ಹಿಂದೆಯೂ ಬಿಸ್ವಾಸ್‌ ಮತ್ತು ಇತರ ಇಬ್ಬರು ವೈದ್ಯರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣವನ್ನು ವಿರೋಧಿಸಿ ನಡೆಸುತ್ತಿದ್ದ ಪ್ರತಿಭಟನೆಯು ಅಂತ್ಯಗೊಂಡಿದ್ದು, ಶನಿವಾರ ಕೆಲವು ಜೂನಿಯರ್ ವೈದ್ಯರು ಕೆಲಸಕ್ಕೆ ಹಾಜರಾದರು ಎಂದು ವೈದ್ಯಾಧಿಕಾರಿಗಳು ಹೇಳಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT