ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಲ್ಕತ್ತ ಘಟನೆ ವಿರುದ್ಧ ಪ್ರತಿಭಟಿಸಿದ ಮಾಜಿ ಸಂಸದೆ ಮಿಮಿಗೆ ಅತ್ಯಾಚಾರ ಬೆದರಿಕೆ

Published : 21 ಆಗಸ್ಟ್ 2024, 7:31 IST
Last Updated : 21 ಆಗಸ್ಟ್ 2024, 7:31 IST
ಫಾಲೋ ಮಾಡಿ
Comments

ಬೆಂಗಳೂರು: ಕೋಲ್ಕತ್ತದ ಆರ್‌.ಜಿ ಕರ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಕ್ಕೆ ತಮಗೆ ಅತ್ಯಾಚಾರ ಬೆದರಿಕೆ ಬಂದಿದೆ ಎಂದು ಟಿಎಂಸಿಯ ಮಾಜಿ ಸಂಸದೆ ಮಿಮಿ ಚಕ್ರವರ್ತಿ ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಾಚಾರ ಬೆದರಿಕೆ ಬಂದಿರುವ ಸ್ಕ್ರೀನ್‌ ಶಾಟ್‌ಗಳನ್ನು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

‘ನಾವು ಮಹಿಳೆಗೆ ನ್ಯಾಯ ಸಿಗಬೇಕೆಂದು ಹೋರಾಡುತ್ತಿದ್ದೇವಲ್ಲ. ಮಹಿಳೆಯರ ಪರವಾಗಿ ನಿಲ್ಲುತ್ತೇವೆ ಎಂದು ಹೇಳುವವರು, ಜನಸಂದಣಿಯಲ್ಲಿ ಮರೆಯಾಗಿ ನಿಂತು ವಿಷಕಾರುವ ಜನರು ಅತ್ಯಾಚಾರ ಬೆದರಿಕೆಗಳನ್ನು ಸಾಮಾನ್ಯಗೊಳಿಸುತ್ತಿದ್ದಾರೆ. ಇದಕ್ಕೆ ಯಾವ ಶಿಕ್ಷಣ ಬೆಂಬಲ ನೀಡುತ್ತದೆ’ ಎಂದು ಪ್ರಶ್ನಿಸಿದ್ದಾರೆ.

ಆರ್‌.ಜಿ ಕರ್ ಘಟನೆ ಬಗ್ಗೆ ಮಿಮಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಲವು ಪೋಸ್ಟ್‌ಗಳನ್ನು ಹಾಕಿದ್ದರು.

ಮಿಮಿ ಚಕ್ರವರ್ತಿ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಟಿಎಂಸಿ ಐಟಿ ಸೆಲ್‌ನ ರಾಜ್ಯ ಮುಖ್ಯಸ್ಥ ನಿಲಂಜನ್ ದಾಸ್, ಮಾಜಿ ಸಂಸದರಿಗೇ ಅತ್ಯಾಚಾರ ಬೆದರಿಕೆ! ಮಹಿಳೆಯರ ಸುರಕ್ಷತೆಯನ್ನು ಕಾಪಾಡಲು ಈಗಲೇ ಕ್ರಮ ಕೈಗೊಳ್ಳಿ’ ಎಂದು ಪೊಲೀಸರನ್ನು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT