ಕೋಲ್ಕತ್ತ: ನಗರದ ಸರ್ಕಾರಿ ಆರ್.ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದಿರುವ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ತನಿಖೆಯನ್ನು ಸಿಬಿಐ ಅಧಿಕಾರಿಗಳು ತೀವ್ರಗೊಳಿಸಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಸಂಜಯ್ ರಾಯ್ ಶವಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿರುವ ವಿಡಿಯೊಗಳು ಆತನ ಮೊಬೈಲ್‌ನಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಜಯ್ ರಾಯ್ ವೈದ್ಯಕೀಯ ಕಾಲೇಜಿನ ಶವಾಗಾರದಲ್ಲಿರುವ ಇತರೆ ಶವಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿರುವ ಫೋಟೊ ಮತ್ತು ವಿಡಿಯೊಗಳು ಪತ್ತೆಯಾಗಿವೆ ಎಂದು ತನಿಖಾಧಿಕಾರಿಯೊಬ್ಬರು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ಆಗಸ್ಟ್ 9ರಂದು ಆರ್.ಜಿ ಕರ್ ವೈದ್ಯಕೀಯ ಕಾಲೇಜು ಆವರಣದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಹತ್ಯೆ ಮಾಡಲಾಗಿತ್ತು. ಘಟನೆ ಖಂಡಿಸಿ ಪಶ್ಚಿಮ ಬಂಗಾಳದಲ್ಲಿ ಆಕ್ರೋಶ ಭುಗಿಲೆದ್ದಿತ್ತು.