ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಣಕಾಸು ಅವ್ಯವಹಾರ: ಸಂದೀಪ್ ಘೋಷ್‌ ನ್ಯಾಯಾಂಗ ಬಂಧನ ಸೆ. 23ರವರೆಗೆ ವಿಸ್ತರಣೆ

Published : 10 ಸೆಪ್ಟೆಂಬರ್ 2024, 11:43 IST
Last Updated : 10 ಸೆಪ್ಟೆಂಬರ್ 2024, 11:43 IST
ಫಾಲೋ ಮಾಡಿ
Comments

ಕೋಲ್ಕತ್ತ: ಹಣಕಾಸು ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತದ ಆರ್‌.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರ ನ್ಯಾಯಾಂಗ ಬಂಧನವನ್ನು ಸಿಬಿಐ ವಿಶೇಷ ನ್ಯಾಯಾಲಯ ಸೆಪ್ಟೆಂಬರ್ 23ರವರೆಗೆ ವಿಸ್ತರಿಸಿದೆ.

ಸಂದೀಪ್ ಘೋಷ್ ಜೊತೆಗೆ ಅವರ ಭದ್ರತಾ ಸಿಬ್ಬಂದಿ ಅಫ್ಸರ್ ಅಲಿ, ಗುತ್ತಿಗೆದಾರರಾದ ಬಿಪ್ಲಬ್ ಸಿನ್ಹಾ ಮತ್ತು ಸುಮನ್ ಹಜ್ರಾ ಅವರನ್ನೂ ಸೆಪ್ಟೆಂಬರ್ 23ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಅಗತ್ಯಬಿದ್ದರೆ ಘೋಷ್‌ ಅವರನ್ನು ಮತ್ತೆ ಕಸ್ಟಡಿಗೆ ತೆಗೆದುಕೊಳ್ಳಲು ಕೋರುವುದಾಗಿ ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ.

ಆರ್.ಜಿ. ಕರ್ ಕಾಲೇಜಿನ ಸಭಾಂಗಣದಲ್ಲಿ ಆ.9ರಂದು ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಅತ್ಯಾಚಾರ ಮತ್ತು ಆಕೆಯ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ, ಕಾಲೇಜಿನಲ್ಲಿ ಹಣಕಾಸು ಅವ್ಯವಹಾರ ನಡೆದಿರುವ ಆರೋಪವು ಕೇಳಿ ಬಂದಿತ್ತು. ಈ ಆರೋಪದ ಮೇಲೆ ಸೆಪ್ಟೆಂಬರ್ 2 ರಂದು ಘೋಷ್‌ ಅವರನ್ನು ಸಿಬಿಐ ಬಂಧಿಸಿತ್ತು.

ಸೆಪ್ಟೆಂಬರ್ 3ರಂದು ನ್ಯಾಯಾಲಯ ಘೋಷ್‌ ಅವರನ್ನು 8 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT