ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಿಳೆಗೆ ಲೈಂಗಿಕ ಕಿರುಕುಳ, ಅವಾಚ್ಯ ಪದಗಳಿಂದ ನಿಂದನೆ: ಕ್ಯಾಬ್‌ ಚಾಲಕನ ಬಂಧನ

Published 27 ಜೂನ್ 2024, 9:38 IST
Last Updated 27 ಜೂನ್ 2024, 9:38 IST
ಅಕ್ಷರ ಗಾತ್ರ

ಕೋಲ್ಕತ್ತ: ಮಹಿಳಾ ಪ್ರಯಾಣಿಕರೊಬ್ಬರಿಗೆ ಕ್ಯಾಬ್‌ನಲ್ಲಿ ಲೈಂಗಿಕ ಕಿರುಕುಳ ನೀಡಿ, ಅವಾಚ್ಯ ಪದಗಳಿಂದ ನಿಂದಿಸಿರುವ ಆರೋಪದಡಿ ಆ್ಯಪ್‌ ಆಧಾರಿತ ಕ್ಯಾಬ್‌ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರಿನಲ್ಲಿ ಎಸಿ ಆನ್‌ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ಪ್ರಾರಂಭವಾಗಿದ್ದು. ಬಳಿಕ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎನ್ನಲಾಗಿದೆ. ಈ ಘಟನೆ ನಿನ್ನೆ (ಬುಧವಾರ) ನಡೆದಿದೆ.

ದಕ್ಷಿಣ ಕೋಲ್ಕತ್ತದಿಂದ ಗರಿಯಾಹತ್‌ಗೆ ಕ್ಯಾಬ್‌ ಬುಕ್‌ ಮಾಡಿದ್ದಾರೆ. ಪ್ರಯಾಣದ ಮಧ್ಯೆ ಎಸಿ ವಿಚಾರಕ್ಕೆ ಜಗಳವಾಗಿದೆ. ಈ ವೇಳೆ ಮಹಿಳೆಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕಿರುಕುಳ ನೀಡಿದ್ದಾನೆ. ಜಾದವ್‌ಪುರ ಬಸ್‌ ನಿಲ್ದಾಣದ ಬಳಿ ಕಾರಿನಿಂದ ಹೊರಗೆ ಇಳಿದಿದ್ದಾರೆ. ನಂತರ ಆಕೆ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದೂರನ್ನು ಆಧರಿಸಿ ಪೊಲೀಸರು ಚಾಲಕನನ್ನು ಬಂಧಿಸಿದ್ದಾರೆ. ಚಾಲಕನನ್ನು ವಿಚಾರಣೆಗೆ ಒಳಪಡಿಸಿದಾಗ ಮಹಿಳೆಯು ಪ್ರಯಾಣದ ದರವನ್ನು ನೀಡದೆ, ಕಾರಿನಿಂದ ಇಳಿದು ಓಡಿ ಹೋಗಿದ್ದಾರೆ ಎಂದು ಚಾಲಕ ಆರೋಪಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT