ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದು ದೇಶ, ಒಂದು ಚುನಾವಣೆ: ಕೋವಿಂದ್ ಸಮಿತಿಗೆ 5000ಕ್ಕೂ ಹೆಚ್ಚು ಸಲಹೆ

Published 10 ಜನವರಿ 2024, 14:12 IST
Last Updated 10 ಜನವರಿ 2024, 14:12 IST
ಅಕ್ಷರ ಗಾತ್ರ

ನವದೆಹಲಿ: ‘ಒಂದು ದೇಶ, ಒಂದು ಚುನಾವಣೆ’ ಕುರಿತಂತೆ ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ನೇತೃತ್ವದಲ್ಲಿ ರಚನೆಯಾಗಿರುವ ಸಮಿತಿಯು ಈವರೆಗೆ ಸಾರ್ವಜನಿಕರಿಂದ 5,000ಕ್ಕೂ ಹೆಚ್ಚು ಸಲಹೆಗಳನ್ನು ಸ್ವೀಕರಿಸಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.

ಸಮಿತಿಯು ಕಳೆದ ವಾರ, ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತಂತೆ ಸಾರ್ವಜನಿಕರಿಂದ ಸಲಹೆಗಳನ್ನು ಆಹ್ವಾನಿಸಿತ್ತು.

ಜನವರಿ 15ರವರೆಗೆ ಸಲ್ಲಿಕೆಯಾಗುವ ಸಲಹೆಗಳನ್ನು ಪರಿಗಣಿಸಲಾಗುವುದು ಎಂದು ಸಮಿತಿಯು ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸಮಿತಿ ರಚನೆಯಾಗಿದ್ದು, ಈವರೆಗೆ ಎರಡು ಸಭೆಗಳನ್ನು ನಡೆಸಿದೆ. ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತು ತಮ್ಮ ಅಭಿಪ್ರಾಯಗಳನ್ನು ತಿಳಿಸುವಂತೆ ಸಮಿತಿಯು ರಾಜಕೀಯ ಪಕ್ಷಗಳಿಗೆ ಇತ್ತೀಚೆಗೆ ಪತ್ರ ಬರೆದಿತ್ತು. 

ಆರು ರಾಷ್ಟ್ರೀಯ ಪಕ್ಷಗಳು, 33 ಪ್ರಾದೇಶಿಕ ಪಕ್ಷಗಳು ಹಾಗೂ ಗುರುತಿಸಲಾಗದ ಏಳು ನೋಂದಾಯಿತ ಪಕ್ಷಗಳಿಗೆ ಸಮಿತಿ  ಪತ್ರ ಬರೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT