ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜಾಮಾ ಮಸೀದಿಯಲ್ಲಿ ಸಮೀಕ್ಷೆ ನಡೆಸಲು ಕೋರಿ ಅರ್ಜಿ: ಪ್ರತಿಕ್ರಿಯಿಸಲು ASIಗೆ ಸೂಚನೆ

Published 5 ಜುಲೈ 2024, 14:24 IST
Last Updated 5 ಜುಲೈ 2024, 14:24 IST
ಅಕ್ಷರ ಗಾತ್ರ

ಪ್ರಯಾಗ್‌ರಾಜ್‌: ಮಥುರಾದ ಕೃಷ್ಣ ಜನ್ಮಭೂಮಿಯಲ್ಲಿದ್ದ ಠಾಕೂರ್‌ ಕೇಶವದೇವ ಮೂರ್ತಿಯನ್ನು ಆಗ್ರಾದ ಜಾಮಾ ಮಸೀದಿಯಲ್ಲಿ ಹೂಳಲಾಗಿದೆ. ಹೀಗಾಗಿ ಆ ಮಸೀದಿಯಲ್ಲಿ ಸಮೀಕ್ಷೆ ನಡೆಸಬೇಕು ಎಂದು ಕೋರಿ ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಹೈಕೋರ್ಟ್‌ ಸೂಚಿಸಿದೆ. 

ಮಥುರಾದ ಕೇಶವದೇವ ದೇವಾಲಯವನ್ನು 1670ರಲ್ಲಿ ಮೊಘಲ್‌ ದೊರೆ ಔರಂಗಜೇಬ್‌ ನೆಲಸಮ ಮಾಡಿದ್ದ ಮತ್ತು ಮೂರ್ತಿಯ ಅವಶೇಷಗಳನ್ನು ಜಾಮಾ ಮಸೀದಿಯಲ್ಲಿ ಹೂತಿದ್ದ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಜೊತೆಗೆ, ಸಮೀಕ್ಷೆಯ ಮೇಲ್ವಿಚಾರಣೆ ನಡೆಸಲು ಕೋರ್ಟ್‌ ಕಮಿಷನರ್‌ ಅವರನ್ನು ನೇಮಿಸುವಂತೆಯೂ ಮನವಿ ಮಾಡಿದ್ದಾರೆ. 

ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಮಾಯಾಂಕ್‌ ಕುಮಾರ್‌ ಜೈನ್‌ ಅವರು ಗುರುವಾರ ನಡೆಸಿದರು. ಎಎಸ್‌ಐ ಸಮೀಕ್ಷೆ ಜೊತೆ ಎಸ್‌ಐಟಿ ತನಿಖೆ ನಡೆಸುವಂತೆ ಸೂಚಿಸಲು ಮನವಿ ಮಾಡಿದ್ದಾರೆ. 

ಅರ್ಜಿಯ ಮುಂದಿನ ವಿಚಾರಣೆಯನ್ನು ಹೈಕೋರ್ಟ್‌ ಆಗಸ್ಟ್‌ 5ಕ್ಕೆ ನಿಗದಿಪಡಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT