ಮಥುರಾ: ಈ ಬಾರಿಯ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮಥುರಾಕ್ಕೆ 50 ಲಕ್ಷಕ್ಕೂ ಅಧಿಕ ಮಂದಿ ಭೇಟಿ ನೀಡುವ ನಿರೀಕ್ಷೆ ಇದೆ. ಈ ನಿಟ್ಟಿನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಗಸ್ಟ್ 16ರಂದು ಶ್ರೀಕೃಷ್ಣನ 5,252 ನೇ ಜನ್ಮ ದಿನಾಚರಣೆಯನ್ನು ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ದೇವಸ್ಥಾನ ಸೇರಿದಂತೆ ನಗರದ ಎಲ್ಲಾ ಪ್ರಮುಖ ದೇವಾಲಯ ಹಾಗೂ ವೃಂದಾವನದ ಠಾಕೂರ್ ಬಂಕೆ ಬಿಹಾರಿ ದೇವಸ್ಥಾನದಲ್ಲಿ ಆಚರಿಸಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಶ್ಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.
.ಭಾರತದ ವಿಮಾನಗಳಿಗೆ ವಾಯುಪ್ರದೇಶ ನಿರ್ಬಂಧ; ಪಾಕ್ಗೆ ₹4.1 ಶತಕೋಟಿ ನಷ್ಟ: ವರದಿ.ನಮ್ಮ ಮೆಟ್ರೊ ಹಳದಿ ಮಾರ್ಗದಲ್ಲಿ ಚಾಲಕ ರಹಿತ ರೈಲೇ? ಎಷ್ಟು ನಿಮಿಷಕ್ಕೊಂದು ಟ್ರಿಪ್?.
ಮಥುರಾ, ವೃಂದಾವನ, ಬರ್ಸಾನ, ಗೋಕುಲ, ನಂದಗಾಂವ್, ಗೋವರ್ಧನ ಮತ್ತು ಮಹಾವನ ಸೇರಿದಂತೆ ಎಲ್ಲಾ ಯಾತ್ರಾ ಕೇಂದ್ರಗಳಲ್ಲಿ ಸಿದ್ಧತೆಯ ಜತೆಗೆ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗುತ್ತಿದೆ ಎಂದು ಕುಮಾರ್ ಹೇಳಿದ್ದಾರೆ.

ಇದೇ ಮೊದಲ ಬಾರಿಗೆ ಕೃತಕ ಬುದ್ದಿಮತ್ತೆ (ಎಐ) ನಿಯಂತ್ರಿತ ಡ್ರೋನ್ ಕ್ಯಾಮೆರಾಗಳನ್ನು ಅಳವಡಿಸಿದ್ದು, ಮಥುರಾ ನಗರದ ಪ್ರಮುಖ ಸ್ಥಳಗಳು ಕ್ಯಾಮೆರಾಗಳ ಕಣ್ಗಾವಲಿನಲ್ಲಿವೆ ಎಂದು ಕುಮಾರ್ ಹೇಳಿದ್ದಾರೆ.

ನಗರದಾದ್ಯಂತ ಸ್ವಚತಾ ಕಾರ್ಯ ಸೇರಿದಂತೆ ಆಚರಣೆಗೆ ಸಂಬಂಧಿಸಿದ ಸಿದ್ಧತೆ ಕಾರ್ಯಗಳು ಯುದ್ಧೋಪಾದಿಯಲ್ಲಿ ಸಾಗುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಡಲು ವಿವಿಧ ರಾಜ್ಯಗಳಿಂದ ಕಲಾವಿದರು ಆಗಮಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜನ್ಮಾಷ್ಟಮಿಯ ವೇಳೆ ವೃಂದಾವನಕ್ಕೆ ವೃದ್ಧರು, ಮಕ್ಕಳು, ಗರ್ಭಿಣಿಯರು, ಅಂಗವಿಕಲರು ಸೇರಿದಂತೆ ರಕ್ತದೊತ್ತಡದಿಂದ ಬಳಲುತ್ತಿರುವ ರೋಗಿಗಳು ಆಗಮಿಸದಂತೆ ಆಡಳಿತ ಮಂಡಳಿ ಮನವಿ ಮಾಡಿದೆ.
.ಬೆಳಗಾವಿ–ಬೆಂಗಳೂರು ನೂತನ ವಂದೇ ಭಾರತ್ ರೈಲು ಸಂಚಾರದ ವೇಳಾಪಟ್ಟಿ ಇಲ್ಲಿದೆ...ವಿಷ್ಣುವರ್ಧನ್ ಸಮಾಧಿ ತೆರವು: ನಟ ರಿಷಬ್ ಶೆಟ್ಟಿ ಹೇಳಿದ್ದೇನು?.ಪಿಎಂ ಭೇಟಿ: ನಮ್ಮ ಮೆಟ್ರೊ ಹಸಿರು ಮಾರ್ಗದ ಈ ನಿಲ್ದಾಣಗಳು ಇಂದು ತಾತ್ಕಾಲಿಕ ಬಂದ್.SS ರಾಜಮೌಳಿ-ಮಹೇಶ್ ಬಾಬು ಕಾಂಬಿನೇಷನ್ನ ಹೊಸ ಸಿನಿಮಾ ಹೆಸರು ಘೋಷಣೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.