ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿಶ್ವ ಸುಂದರಿ 2024: ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಕೋವಾಗೆ ಕಿರೀಟ

Published : 10 ಮಾರ್ಚ್ 2024, 2:11 IST
Last Updated : 10 ಮಾರ್ಚ್ 2024, 2:11 IST
ಫಾಲೋ ಮಾಡಿ
Comments

ಮುಂಬೈ: ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಕೋವಾ ಅವರು 2024ನೇ ಸಾಲಿನ ‘ವಿಶ್ವ ಸುಂದರಿ’ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

ನಗರದ ಜಿಯೊ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ 71ನೇ ಆವೃತ್ತಿಯ ಸ್ಪರ್ಧೆಯಲ್ಲಿ ಹಲವು ದೇಶಗಳ 112 ಸುಂದರಿಯರು ಪಾಲ್ಗೊಂಡಿದ್ದರು.

ಲೆಬನಾನ್‌ನ ಯಾಸ್ಮಿನಾ ಜೈಟೌನ್ ರನ್ನರ್-ಅಪ್ ಆದರು. ಉಡುಪಿ ಜಿಲ್ಲೆಯ ಇನ್ನಂಜೆ ಮೂಲದ ಸಿನಿ ಶೆಟ್ಟಿ ಅವರು ಭಾರತವನ್ನು ಪ್ರತಿನಿಧಿಸಿದ್ದರು. ಆದರೆ, ಅಗ್ರ 4ರೊಳಗೆ ಬರಲು ಅವರಿಗೆ ಸಾಧ್ಯವಾಗಲಿಲ್ಲ.

ಬಾಲಿವುಡ್ ನಿರ್ಮಾಪಕ ಕರಣ್ ಜೋಹರ್, ಮಾಜಿ ವಿಶ್ವ ಸುಂದರಿ ಫಿಲಿಪ್ಪೀನ್ಸ್‌ನ ಮೇಗನ್ ಯಂಗ್ ಅವರ ನೇತೃತ್ವದಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ನಟಿಯರಾದ ಕೃತಿ ಸನೋನ್, ಪೂಜಾ ಹೆಗ್ಡೆ ಮತ್ತು ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ಕೃತಿ ಹಸಿರು ಬಣ್ಣದ ಗೌನ್‌ನಲ್ಲಿ ಸ್ಟೈಲಿಶ್ ಆಗಿ ಕಾಣಿಸಿಕೊಂಡರೆ, ಪೂಜಾ ಗುಲಾಬಿ ಬಣ್ಣದ ಗೌನ್ ಧರಿಸಿ ಮಿಂಚಿದರು. ಇವರಿಬ್ಬರು ತೀರ್ಪುಗಾರರ ಸಮಿತಿಯ ಭಾಗವಾಗಿದ್ದರು. ಇತ್ತ ಕರಣ್ ಜೋಹರ್ ಕಪ್ಪು ಬಣ್ಣದ ಟುಕ್ಸೆಡೊ ಸೂಟ್‌ನಲ್ಲಿ ಗಮನ ಸೆಳೆದಿದ್ದಾರೆ.

28 ವರ್ಷಗಳ ನಂತರ ಭಾರತದಲ್ಲಿ ವಿಶ್ವ ಸುಂದರಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಭಾರತದಲ್ಲಿ ಕೊನೆಯದಾಗಿ 1996ರಲ್ಲಿ ವಿಶ್ವ ಸುಂದರಿ ಸ್ಪರ್ಧೆಯ 46ನೇ ಆವೃತ್ತಿಯನ್ನು ಆಯೋಜಿಸಲಾಗಿತ್ತು. ಆಗ ಗ್ರೀಸ್‌ನ ಐರಿನ್ ಸ್ಕ್ಲಿವಾ ಪ್ರಶಸ್ತಿಯನ್ನು ಗೆದ್ದಿದ್ದರು.

70ನೇ ಆವೃತ್ತಿಯ ಸ್ಪರ್ಧೆಯಲ್ಲಿ ಪೋಲೆಂಡ್‌ನ ಕರೋಲಿನಾ ಬೈಲಾವ್ಸ್ಕಾ ಅವರು 2022ನೇ ಸಾಲಿನ ‘ವಿಶ್ವ ಸುಂದರಿ’ ಗೌರವಕ್ಕೆ ಪಾತ್ರರಾಗಿದ್ದರು. ಆಗ 96 ದೇಶಗಳ ಸುಂದರಿಯರು ಪಾಲ್ಗೊಂಡಿದ್ದರು.

ಕ್ರಿಸ್ಟಿನಾ ಪಿಸ್ಕೋವಾ

ಕ್ರಿಸ್ಟಿನಾ ಪಿಸ್ಕೋವಾ

ಕ್ರಿಸ್ಟಿನಾ ಪಿಸ್ಕೋವಾ

ಕ್ರಿಸ್ಟಿನಾ ಪಿಸ್ಕೋವಾ

ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಸುಂದರಿಯರು

ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಸುಂದರಿಯರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT