ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ ಸಾರಿಗೆ ಬಸ್‌ಗೆ ಬೆಂಕಿ: ಪ್ರಯಾಣಿಕರು ಪಾರು

Published 23 ಫೆಬ್ರುವರಿ 2024, 6:04 IST
Last Updated 23 ಫೆಬ್ರುವರಿ 2024, 6:04 IST
ಅಕ್ಷರ ಗಾತ್ರ

ಆಳಪ್ಪುಳ (ಕೇರಳ): ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ವೊಂದಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಇಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಸುದೈವವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.

ಕಾಯಕ್ಕುಳಂ – ಆಳಪ್ಪುಳ ನಡುವೆ ಸಂಚರಿಸುವಾಗ ಘಟನೆ ನಡೆದಿದೆ. ಸುಟ್ಟ ವಾಸನೆ ಬಂದಿದ್ದರಿಂದ ಪ್ರಯಾಣಿಕರನ್ನು ಕೆಳಗಿಳಿಯುವಂತೆ ಚಾಲಕ ಸೂಚಿಸಿದ್ದ. ಹೀಗಾಗಿ ಯಾರಿಗೂ ಗಾಯವಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದು, ಘಟನೆಗೆ ಕಾರಣವೇನು ಎಂಬುದು ಇನ್ನಷ್ಟೇ ಪತ್ತೆ ಮಾಡಬೇಕಿದೆ ಎಂದು ಅವರು ಹೇಳಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಘಟನೆ ಜರುಗಿದ್ದು, ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದೆ. ಬಸ್‌ ಬಹುತೇಕ ಬೆಂಕಿಗೆ ಆಹುತಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT