‘ಅಪರಾಧಿಯ ಶಿಕ್ಷೆ ಅಮಾನತುಗೊಂಡಿರುವುದಕ್ಕೆ ನಾನು ಹೆದರುವುದಿಲ್ಲ. ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ’ ಎಂದು ಉನ್ನಾವೊ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಹೇಳಿದ್ದಾರೆ. ‘ದೇಶದ ಮಹಿಳೆಯರಿಗಾಗುತ್ತಿರುವ ಅನ್ಯಾಯವನ್ನು ಸಾರ್ವಜನಿಕವಾಗಿ ಪ್ರಶ್ನಿಸಲು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದೇನೆ. ನನ್ನನ್ನು ಜೈಲಿಗೆ ಹಾಕಿದರೂ ನಾನು ಹೆದರುವುದಿಲ್ಲ’ ಎಂದು ತಿಳಿಸಿದ್ದಾರೆ.
ಉನ್ನಾವೊ ಅತ್ಯಾಚಾರ ಪ್ರಕರಣದ ಅಪರಾಧಿಯ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ದೆಹಲಿ ಹೈಕೋರ್ಟ್ ಮುಂದೆ ಶುಕ್ರವಾರ ಪ್ರತಿಭಟನೆ ನಡೆಯಿತು – ಪಿಟಿಐ ಚಿತ್ರ