ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲಗಾಮ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಹಲವರು ಗಾಯಗೊಂಡಿದ್ದಾರೆ.

ಲ್ಯಾನ್ಸ್ ನಾಯಕ್ ಪ್ರಿತ್ಪಾಲ್ ಸಿಂಗ್ ಮತ್ತು ಹರ್ಮೀಂದರ್ ಸಿಂಗ್ ಹುತಾತ್ಮರಾದವರು.

ಕುಲಗಾಮ್ನಲ್ಲಿ ಆಗಸ್ಟ್ 1ರಿಂದ ಆರಂಭಗೊಂಡಿರುವ ಉಗ್ರರ ವಿರುದ್ಧದ ಕಾರ್ಯಾಚರಣೆ ಸತತ 9ನೇ ದಿನವೂ ಮುಂದುವರಿದಿದೆ. ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಗುಪ್ತಚರ ಮಾಹಿತಿಯ ಆಧಾರದ ಮೇರೆಗೆ ದಕ್ಷಿಣ ಕಾಶ್ಮೀರದ ಅಖಲ್ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ’ ಎಂದು ಕಾಶ್ಮೀರ ಕಣಿವೆಯಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಸೇನೆಯ ಚಿನಾರ್ ಕೋರ್ ಘಟಕ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.