ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕುವೈತ್ ಅಗ್ನಿದುರಂತ: ಕೊಚ್ಚಿನ್‌ಗೆ ಬಂದಿಳಿದ ಭಾರತೀಯರ ಮೃತದೇಹ ಹೊತ್ತ IAF ವಿಮಾನ

Published 14 ಜೂನ್ 2024, 5:43 IST
Last Updated 14 ಜೂನ್ 2024, 5:43 IST
ಅಕ್ಷರ ಗಾತ್ರ

ಕೊಚ್ಚಿ: ಎರಡು ದಿನಗಳ ಹಿಂದೆ ಕುವೈತ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟ ಭಾರತೀಯರ ಪಾರ್ಥಿವ ಶರೀರಗಳನ್ನು ಹೊತ್ತ ಭಾರತೀಯ ವಾಯುಪಡೆಯ (ಐಎಎಫ್ ) ವಿಮಾನವು ಶುಕ್ರವಾರ ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.

IAF C30J ವಿಮಾನದಲ್ಲಿದ್ದ 31 ಮಂದಿಯ ಪಾರ್ಥಿವ ಶರೀರಗಳನ್ನು ಪಡೆಯಲಾಗಿದೆ. 31 ಮೃತದೇಹಗಳಲ್ಲಿ 23 ಕೇರಳೀಯರು, 7 ತಮಿಳಿಗರು ಮತ್ತು ಕರ್ನಾಟಕದ ಒಬ್ಬರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೂನ್ 12 ರಂದು ಕುವೈತ್‌ನ ವಸತಿ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 49 ಮಂದಿ ಮೃತಪಟ್ಟು, 50 ಮಂದಿ ಗಾಯಗೊಂಡಿದ್ದರು. ಮೃತರಲ್ಲಿ ಹೆಚ್ಚಿನವರು ಭಾರತೀಯರಾಗಿದ್ದು, ಉಳಿದವರು ಪಾಕಿಸ್ತಾನ, ಫಿಲಿಪ್ಪೀನ್ಸ್‌, ಈಜಿಪ್ಟ್ ಮತ್ತು ನೇಪಾಳ ಪ್ರಜೆಗಳು ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT