ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆ | ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ: ಎಲ್‌.ಕೆ ಅಡ್ವಾಣಿ ಭಾಗಿ

Published 11 ಜನವರಿ 2024, 12:36 IST
Last Updated 11 ಜನವರಿ 2024, 12:36 IST
ಅಕ್ಷರ ಗಾತ್ರ

ನವದೆಹಲಿ: ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಬಿಜೆಪಿ ಹಿರಿಯ ಮುಖಂಡ ಎಲ್‌.ಕೆ.ಅಡ್ವಾಣಿ ಭಾಗವಹಿಸುತ್ತಾರೆ ಎಂದು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಅಲೋಕ್‌ಕುಮಾರ್ ಗುರುವಾರ ತಿಳಿಸಿದ್ದಾರೆ.

‘ಸಮಾರಂಭಕ್ಕೆ ತಾನು ಬರುವುದಾಗಿ ಅಡ್ವಾಣಿ ತಿಳಿಸಿದ್ದಾರೆ. ಅಗತ್ಯವೆನಿಸಿದರೆ, ಅವರಿಗಾಗಿ ನಾವು ವಿಶೇಷ ವ್ಯವಸ್ಥೆಯನ್ನು ಮಾಡಲಿದ್ದೇವೆ‘ ಎಂದು ಅಲೋಕ್‌ಕುಮಾರ್ ತಿಳಿಸಿದ್ದಾರೆ.

ಪಕ್ಷದ ಮತ್ತೊಬ್ಬ ಹಿರಿಯ ಮುಖಂಡ ಮುರಳಿ ಮನೋಹರ ಜೋಷಿ ಸಮಾರಂಭದಲ್ಲಿ ಭಾಗವಹಿಸುವರೇ ಇಲ್ಲವೇ ಎನ್ನುವುದು ಇನ್ನೂ ಖಚಿತವಾಗಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿದ ಅಲೋಕ್‌ಕುಮಾರ್, ‘ಸಮಾರಂಭಕ್ಕೆ ಬರಲು ಪ್ರಯತ್ನಿಸುವುದಾಗಿ ಅವರು ತಿಳಿಸಿದ್ದಾರೆ‘ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT