ಲೇಹ್: ಪೊಲೀಸರು ಮತ್ತು ಪ್ರತಿಭಟನಕಾರರ ಮಧ್ಯೆ ಸಂಘರ್ಷ ಏರ್ಪಟ್ಟ ಕಾರಣ ಲಡಾಖ್ ಉತ್ಸವದ ಕೊನೆಯ ದಿನದ ಕಾರ್ಯಕ್ರಮಗಳು ರದ್ದುಗೊಂಡಿವೆ.

ಉತ್ಸವವು ಭಾನುವಾರದಿಂದ ಆರಂಭಗೊಂಡಿದೆ. ಈ ಮಧ್ಯೆ ಲಡಾಖ್ಗೆ ರಾಜ್ಯ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಲೇಹ್ನಲ್ಲಿ ಬಂದ್ ಆಚರಿಸಲಾಗಿತ್ತು. ಲೆಫ್ಟಿನೆಂಟ್ ಗವರ್ನರ್ ಕವಿಂದರ್ ಗುಪ್ತಾ ಅವರು ಉತ್ಸದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಬೇಕಿತ್ತು.

‘ಅನಿವಾರ್ಯ ಕಾರಣಗಳಿಂದ ಲಡಾಖ್ ಉತ್ಸವದ ಸಮಾರೋಪ ಸಮಾರಂಭವನ್ನು ರದ್ದು ಮಾಡಲಾಗಿದೆ’ ಎಂದು ಆಡಳಿತ ವ್ಯವಸ್ಥೆ ಘೋಷಿಸಿದೆ.

‘ಸ್ಥಳೀಯ ಕಲಾವಿದರು, ಸಾಂಸ್ಕೃತಿಕ ತಂಡಗಳು, ಪ್ರವಾಸಿಗರು ಮತ್ತು ಲಡಾಖ್ ಜನತೆಗೆ ಉಂಟಾದ ಅನನುಕೂಲಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇವೆ’ ಎಂದು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಹೇಳಿಕೆ ಬಿಡುಗಡೆ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.