ಲೇಹ್: ಲಡಾಖ್ಗೆ ರಾಜ್ಯದ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಲೇಹ್ನಲ್ಲಿ ನಡೆದ ಪ್ರತಿಭಟನೆಯೂ ಹಿಂಸಾಚಾರಕ್ಕೆ ತಿರುಗಿದ ಬೆನ್ನಲ್ಲೇ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್ಎಸ್ಎಸ್) ಸೆಕ್ಷನ್ 163ರ ಅಡಿಯಲ್ಲಿ ನಗರದಾದ್ಯಂತ ಜಾರಿಗೊಳಿಸಲಾಗಿದ್ದ ಕರ್ಫ್ಯೂ ಸತತ ನಾಲ್ಕನೇ ದಿನವಾದ ಶನಿವಾರವೂ ಮುಂದುವರಿದಿದೆ.

‘ಲಡಾಖ್ನಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ. ಪೂರ್ವಾನುಮತಿ ಇಲ್ಲದೆ ಯಾವುದೇ ಮೆರವಣಿಗೆ, ರ್ಯಾಲಿ ನಡೆಸುವಂತಿಲ್ಲ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲೇಹ್ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ವಾಂಗ್ಚುಕ್ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಬೆಂಬಲಿಸಿ ಲೇಹ್ ಅಪೆಕ್ಸ್ ಬಾಡಿ (ಎಲ್ಎಬಿ) ಬುಧವಾರ ಬಂದ್ಗೆ ಕರೆ ನೀಡಿತ್ತು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಕಾರರ ಮಧ್ಯೆ ಸಂಘರ್ಷ ಉಲ್ಬಣಗೊಂಡು, ನಾಲ್ವರು ಮೃತಪಟ್ಟು, 80ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ಲಡಾಖ್ಗೆ ರಾಜ್ಯದ ಸ್ಥಾನಮಾನ ನೀಡಬೇಕು. ಲಡಾಖ್ ಅನ್ನು ಸಂವಿಧಾನದ ಆರನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಿ ಸ್ವಾಯತ್ತ ಪ್ರದೇಶ ಎಂದು ಘೋಷಿಸಬೇಕು ಎಂಬುದು ಲಡಾಖ್ ಜನರ ಪ್ರಮುಖ ಬೇಡಿಕೆಯಾಗಿದೆ.
.ಪೊಲೀಸ್–ಪ್ರತಿಭಟನಕಾರರ ಮಧ್ಯೆ ಸಂಘರ್ಷ: ಲಡಾಖ್ ಉತ್ಸವ ರದ್ದು.ಲಡಾಖ್ ಹಿಂಸಾಚಾರ | ನನ್ನ ಬಂಧನದಿಂದ ಸರ್ಕಾರಕ್ಕೆ ಸಮಸ್ಯೆ; ಸೋನಮ್ ವಾಂಗ್ಚುಕ್.ಆಳ-ಅಗಲ | ಲಡಾಖ್: ರಾಜ್ಯ ಸ್ಥಾನಮಾನ, ಸ್ವಾಯತ್ತೆಗಾಗಿ ಹೋರಾಟ.ಲೇಹ್ನಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪ: ಸೋನಮ್ ವಾಂಗ್ಚುಕ್ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.