ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣ: ಆಶಿಶ್‌ ಜಾಮೀನು ಅವಧಿ ವಿಸ್ತರಣೆ

Published 12 ಫೆಬ್ರುವರಿ 2024, 13:31 IST
Last Updated 12 ಫೆಬ್ರುವರಿ 2024, 13:31 IST
ಅಕ್ಷರ ಗಾತ್ರ

ನವದೆಹಲಿ: ಎಂಟು ಜನರ ಸಾವಿಗೆ ಕಾರಣವಾಗಿದ್ದ ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್‌ ಕುಮಾರ್‌ ಮಿಶ್ರಾ ಅವರ ಪುತ್ರ ಆಶಿಶ್‌ ಮಿಶ್ರಾಗೆ ನೀಡಿದ್ದ ಮಧ್ಯಂತರ ಜಾಮೀನು ಅವಧಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ವಿಸ್ತರಿಸಿದೆ.

ಪ್ರಕರಣದ ಪ್ರಗತಿಯ ಬಗ್ಗೆ ವಿಚಾರಣಾ ನ್ಯಾಯಾಲಯದಿಂದ ವರದಿ ಪಡೆಯುವಂತೆ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ಸುಪ್ರೀಂ ಕೋರ್ಟ್‌ ರಿಜಿಸ್ಟ್ರಿಗೆ ನಿರ್ದೇಶನ ನೀಡಿದ್ದು, ವಿಚಾರಣೆಯನ್ನು ಮುಂದೂಡಿದೆ. 

2023ರ ಸೆ.26ರಂದು ಮಿಶ್ರಾಗೆ ನೀಡಿದ್ದ ಮಧ್ಯಂತರ ಜಾಮೀನಿನಲ್ಲಿನ ಷರತ್ತುಗಳನ್ನು ಸಡಿಲಗೊಳಿಸಿದ್ದ ಸುಪ್ರೀಂ ಕೋರ್ಟ್‌, ಅನಾರೋಗ್ಯಕ್ಕೀಡಾಗಿದ್ದ ತಾಯಿಯನ್ನು ನೋಡಿಕೊಳ್ಳಲು ಹಾಗೂ ಪುತ್ರಿಗೆ ಚಿಕಿತ್ಸೆ ಕೊಡಿಸುವುದಕ್ಕಾಗಿ ದೆಹಲಿಗೆ ಭೇಟಿ ನೀಡಲು ಆಶಿಶ್‌ಗೆ ಅನುವು ಮಾಡಿಕೊಟ್ಟಿತ್ತು.

ಜುಲೈ 11ರವರೆಗೂ ಮಧ್ಯಂತರ ಜಾಮೀನಿನ ಅವಧಿಯನ್ನು ಸುಪ್ರೀಂ ಕೋರ್ಟ್ ವಿಸ್ತರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT