ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಿಜೋರಾಂ ನೂತನ ಮುಖ್ಯಮಂತ್ರಿಯಾಗಿ ಲಾಲ್ದುಹೋಮಾ ಪ್ರಮಾಣ ವಚನ

Published 8 ಡಿಸೆಂಬರ್ 2023, 7:43 IST
Last Updated 8 ಡಿಸೆಂಬರ್ 2023, 7:43 IST
ಅಕ್ಷರ ಗಾತ್ರ

ಐಜ್ವಾಲ್: ಝೋರಂ ಪೀಪಲ್ಸ್ ಮೂವ್‌ಮೆಂಟ್‌ನ (ಝೆಡ್‌ಪಿಎಂ) ಅಧ್ಯಕ್ಷ ಲಾಲ್ದುಹೋಮಾ ಅವರು ಮಿಜೋರಾಂನ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಹರಿಬಾಬು ಕಂಭಂಪತಿ ಪ್ರತಿಜ್ಞಾವಿಧಿ ಬೋಧಿಸಿದರು.

ಈ ವೇಳೆ 11 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

40 ಸದಸ್ಯ ಬಲದ ಮಿಜೋರಾಂನಲ್ಲಿ ಝೆಡ್‌ಪಿಎಂ ಪಕ್ಷ 27 ಸ್ಥಾನಗಳನ್ನು ಗೆದ್ದುಕೊಳ್ಳುವ ಮೂಲಕ ಬಹುಮತ ಸಾಧಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT