ಪಟ್ನಾ: ‘ನನಗೆ ಜೀವ ಬೆದರಿಕೆ ಇದೆ. ಶತ್ರುಗಳು ನನ್ನನ್ನು ಸಾಯಿಸಬಹುದು’ ಎಂದು ಆರ್ಜೆಡಿ ಅಧ್ಯಕ್ಷ ಲಾಲೂ ಪ್ರಸಾದ್ ಅವರ ಹಿರಿಯ ಪುತ್ರ, ಜನಶಕ್ತಿ ಜನತಾ ದಳದ ಮುಖ್ಯಸ್ಥ ತೇಜ್ ಪ್ರತಾಪ್ ಯಾದವ್ ಭಾನುವಾರ ಹೇಳಿದ್ದಾರೆ.

ಮಹಿಳೆಯೊಂದಿಗೆ ಸಂಬಂಧ ಹೊಂದಿರುವುದಾಗಿ ಒಪ್ಪಿಕೊಂಡ ಬೆನ್ನಲ್ಲೇ, ತೇಜ್ ಪ್ರತಾಪ್ ಅವರನ್ನು ಮೇ 25ರಂದು ಆರ್ಜೆಡಿಯಿಂದ ಹೊರಗೆ ಹಾಕಲಾಗಿತ್ತು. ಅದರ ಬೆನ್ನಲ್ಲೇ, ಅವರು ಹೊಸ ಪಕ್ಷ ಸ್ಥಾಪಿಸಿ, ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮಹುವಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು.
.ನಿಶ್ಚಿತಾರ್ಥದ ಸಂಭ್ರಮದಲ್ಲಿ ‘ಉಗ್ರಂ’ ಮಂಜು .ವಂದೇ ಭಾರತ್ ರೈಲಿನಲ್ಲಿ ವಿದ್ಯಾರ್ಥಿಗಳಿಂದ RSSಗೀತೆ: ತನಿಖೆಗೆ ಕೇರಳ ಸರ್ಕಾರ ಆದೇಶ.
‘ಜೀವ ಬೆದರಿಕೆ ಇರುವುದರಿಂದ ಭದ್ರತೆ ಹೆಚ್ಚಿಸಿಕೊಂಡಿದ್ದೇನೆ’ ಎಂದು ಅವರು ಭಾನುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಆದರೆ, ತಮ್ಮ ಶತ್ರುಗಳು ಯಾರು ಎನ್ನುವುದನ್ನು ಬಹಿರಂಗಪಡಿಸಲು ಅವರು ನಿರಾಕರಿಸಿದ್ದಾರೆ.

ತಮ್ಮ ಕಿರಿಯ ಸಹೋದರ ತೇಜಸ್ವಿ ಯಾದವ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿರುವ ತೇಜ್ ಪ್ರತಾಪ್ ಯಾದವ್, ‘ಅವನಿಗೆ ನನ್ನ ಆರ್ಶೀವಾದ ಯಾವಾಗಲೂ ಇದೆ. ಆತ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ’ ಎಂದು ಹಾರೈಸಿದ್ದಾರೆ. ಪಕ್ಷದಿಂದ ಹೊರಹಾಕಿದ ಸಂದರ್ಭದಲ್ಲಿ, ‘ನನ್ನ ಮತ್ತು ನನ್ನ ಕಿರಿಯ ಸಹೋದರನ ನಡುವೆ ಬಿರುಕು ಮೂಡಿಸಲು ಪಿತೂರಿ ನಡೆದಿದೆ’ ಎಂದು ತೇಜ್ ಪ್ರತಾಪ್ ಆರೋಪಿಸಿದ್ದರು.
.ಮತಕಳ್ಳತನದ ವಿರುದ್ಧ ಜನ ಒಗ್ಗೂಡಿದರೆ ಬಿಹಾರದಲ್ಲಿ ನಮ್ಮದೇ ಅಧಿಕಾರ: ರಾಹುಲ್ ಗಾಂಧಿ.MP: ದಿನಪತ್ರಿಕೆಯಲ್ಲಿ ಮಕ್ಕಳಿಗೆ ಬಿಸಿಯೂಟ; ವಿವಾದದ ಬಳಿಕ ಸ್ಟೀಲ್ಪ್ಲೇಟ್ ವಿತರಣೆ.
ಈ ಹಿಂದೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದ ಲಾಲೂ, ‘ನನ್ನ ಹಿರಿಯ ಪುತ್ರ ತೇಜ್ ಪ್ರತಾಪ್ನ ಕಾರ್ಯಚಟುವಟಿಕೆಗಳು ನಮ್ಮ ಕುಟುಂಬದ ಘನತೆಗೆ, ಪರಂಪರೆಗೆ ತಕ್ಕುದಾಗಿಲ್ಲ. ಆತನ ಬೇಜವಾಬ್ದಾರಿಯುತ ವರ್ತನೆಯಿಂದಾಗಿ ಅವನನ್ನು ಪಕ್ಷ ಹಾಗೂ ಕುಟುಂಬದಿಂದ ಉಚ್ಚಾಟಿಸುತ್ತಿದ್ದೇನೆ. ಇನ್ನು ಮುಂದೆ ಪಕ್ಷಕ್ಕಾಗಲಿ, ಕುಟುಂಬಕ್ಕಾಗಲಿ ಆತ ಸಂಬಂಧಿಸಿದವನಲ್ಲ. ಆರು ವರ್ಷಗಳ ಅವಧಿಗೆ ಪಕ್ಷದಿಂದ ಉಚ್ಚಾಟಿಸುತ್ತಿದ್ದೇನೆ’ ಎಂದು ಬರೆದುಕೊಂಡಿದ್ದರು.

‘ಮಹಿಳೆಯೊಬ್ಬರ ಜತೆಗೆ ನಾನು ಸಂಬಂಧ ಹೊಂದಿದ್ದೇನೆ’ ಎಂದು ತೇಜ್ ಪ್ರತಾಪ್ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದರು. ಈ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗುತ್ತಿದ್ದಂತೆಯೇ ತನ್ನ ಅಕೌಂಟ್ ಹ್ಯಾಕ್ ಆಗಿದೆ ಎಂದೂ ಹೇಳಿಕೊಂಡಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ತೇಜ್ ಅವರನ್ನು ಲಾಲೂ ಉಚ್ಚಾಟನೆ ಮಾಡಿದ್ದರು.
.ಅತ್ಯಾಚಾರ ಪ್ರಕರಣ: ಎಎಪಿ ಶಾಸಕ ಹರ್ಮೀತ್ ಸಿಂಗ್ ಆಸ್ಟ್ರೇಲಿಯಾಕ್ಕೆ ಪರಾರಿ.ವಿಜಯನಗರಕ್ಕೆ ಸಿಎಂ ಭೇಟಿ: 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.