ನವದೆಹಲಿ(ಪಿಟಿಐ): ಭೂ ಸ್ವಾಧೀನಕ್ಕೆ ಸಂಬಂಧಿಸಿದ ನೀತಿಯಲ್ಲಿ ಬದಲಾವಣೆ ತರುವ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ ಎಂದು ಕೇಂದ್ರ ಸಂಪುಟ ಕಾರ್ಯದರ್ಶಿ ಟಿ.ವಿ.ಸೋಮನಾಥನ್ ಶುಕ್ರವಾರ ಹೇಳಿದ್ದಾರೆ.

ಭೂಸ್ವಾಧೀನ ಹಾಗೂ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ.

‘ಎಲ್ಲ ರಾಜ್ಯ ಸರ್ಕಾರಗಳು ಯೋಜನೆಗಳನ್ನು ಶೀಘ್ರವೇ ಮುಕ್ತಾಯಗೊಳಿಸಲು ಬಯಸಿವೆ. ಈ ನಿಟ್ಟಿನಲ್ಲಿ ಎದುರಾಗಿರುವ ಸಮಸ್ಯೆಗಳನ್ನು ನಿವಾರಿಸಿಕೊಳ್ಳುವುದಕ್ಕೆ ಸಂಬಂಧಿಸಿ ಎಲ್ಲ ಮುಖ್ಯ ಕಾರ್ಯದರ್ಶಿಗಳು ಸಕಾರಾತ್ಮಕವಾಗಿ ಸ್ಪಂದಿಸಿದರು’ ಎಂದು ಹೇಳಿದರು.

‘ಸಭೆಯಲ್ಲಿ ಪ್ರಸ್ತಾಪಗೊಂಡ ಯೋಜನೆಗಳ ಪೈಕಿ ಶೇ 71ರಷ್ಟು ಯೋಜನೆಗಳು ಭೂ ಸ್ವಾಧೀನ/ಅರಣ್ಯ ಅಥವಾ ಪರಿಸರ ಅನುಮೋದನೆಗೆ ಸಂಬಂಧಿಸಿದ್ದಾಗಿದ್ದವು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.