ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣ ಆರೋಪಕ್ಕೆ ಸಂಬಂಧಿಸಿ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಸದ್ಯ ಬಂಧಿಸುವುದಿಲ್ಲ ಎಂದು ಸಿಬಿಐ ದೆಹಲಿ ಹೈಕೋರ್ಟ್‌ಗೆ ಗುರುವಾರ ಹೇಳಿತು. ವಿಚಾರಣೆಗಾಗಿ ಮಾರ್ಚ್ 25ರಂದು ಸಿಬಿಐ ಎದುರು ಹಾಜರಾಗುವುದಾಗಿ ತೇಜಸ್ವಿ ಒಪ್ಪಿಗೆ ನೀಡಿದ ಬಳಿಕ ಸಿಬಿಐ ಹೀಗೆ ಹೇಳಿದೆ.

ಈ ಕುರಿತು ಸಿಬಿಐ ಪರ ವಕೀಲರ ಹೇಳಿಕೆಯನ್ನು ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರು ದಾಖಲಿಸಿಕೊಂಡರು. ಬಳಿಕ, ತೇಜಸ್ವಿ ಮಾರ್ಚ್ 25ರಂದು ಬೆಳಿಗ್ಗೆ 10.30ಕ್ಕೆ ದೆಹಲಿಯ ಸಿಬಿಐ ಮುಖ್ಯಕಚೇರಿಯಲ್ಲಿ ಹಾಜರಿರುತ್ತಾರೆ ಎಂದು ಅವರ ಪರ ವಕೀಲ ಮಣಿಂದರ್ ಸಿಂಗ್ ಕೋರ್ಟ್‌ಗೆ ಹೇಳಿಕೆ ಸಲ್ಲಿಸಿದರು.

ಬಿಹಾರ ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಕಾರಣ ತನಿಖಾಧಿಕಾರಿಗಳ ಎದುರು ಹಾಜರಾಗಲು ಕಾಲಾವಕಾಶ ನೀಡಬೇಕೆಂದು ಕೋರಿ ತೇಜಸ್ವಿ ಅವರು ಪತ್ರಗಳ ಮೂಲಕ ಸಿಬಿಐಗೆ ಮನವಿ ಸಲ್ಲಿಸಿದ್ದರು. ಈ ನಿಟ್ಟಿನಲ್ಲಿ ಇಬ್ಬರ ಪರ ವಕೀಲರು ಹೇಳಿಕೆ ಸಲ್ಲಿಸಿದ ಬಳಿಕ, ಸಿಬಿಐ ತಮಗೆ ನೀಡಿದ್ದ ಸಮನ್ಸ್ ರದ್ದುಪಡಿಸುವಂತೆ ಕೋರಿ ತೇಜಸ್ವಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತು.

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು 2004ರಿಂದ 2009ರ ವರೆಗಿನ ಅವಧಿಗೆ ಕೇಂದ್ರ ರೈಲ್ವೆ ಸಚಿವರಾಗಿದ್ದ ವೇಳೆ ಅವರ ಕುಟುಂಬಕ್ಕೆ ಜಮೀನು ಮಾರಾಟ ಮಾಡಿದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ನೀಡಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದ ಮೊಕದ್ದಮೆ ಇದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.