ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳದ (ಆರ್ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಅವರಿಗೆ ದೆಹಲಿ ನ್ಯಾಯಾಲಯವು ಇಂದು (ಮಂಗಳವಾರ) ಸಮನ್ಸ್ ಜಾರಿ ಮಾಡಿದೆ.

ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರು ಲಾಲು ಪ್ರಸಾದ್ ಅವರ ಪುತ್ರ, ಬಿಹಾರದ ಮಾಜಿ ಸಚಿವ ತೇಜ್ ಪ್ರತಾಪ್ ಯಾದವ್, ಪುತ್ರಿ ಹೇಮಾ ಯಾದವ್ ಹಾಗೂ ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೂ ಹೊಸ ಸಮನ್ಸ್ ನೀಡಿದ್ದಾರೆ.

ಮಾರ್ಚ್ 11ರಂದು ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.

2004ರಿಂದ 2009ರವರೆಗೆ ಕೇಂದ್ರ ರೈಲ್ವೆ ಸಚಿವರಾಗಿದ್ದ ಲಾಲು ಪ್ರಸಾದ್ ಅವರು ಗ್ರೂಪ್ ಡಿ ಹುದ್ದೆಗಳಿಗೆ ನೇಮಕವಾದವರಿಂದ ಭೂಮಿಯನ್ನು ಪಡೆದುಕೊಂಡು ತಮ್ಮ ಕುಟುಂಬಸ್ಥರು ಮತ್ತು ಆಪ್ತರ ಹೆಸರುಗಳಿಗೆ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಲಾಲು ಪ್ರಸಾದ್ ಮತ್ತು ಇತರರ ವಿರುದ್ಧ ಸಿಬಿಐ ಹಾಗೂ ಇ.ಡಿ ಪ್ರಕರಣ ದಾಖಲಿಸಿಕೊಂಡಿತ್ತು.
.ದೇಶದ ಚುನಾವಣೆಗಳಿಗೆ ಅಮೆರಿಕ ನೆರವು; ಟ್ರಂಪ್ ಹೇಳಿಕೆ ಗಂಭೀರ: ಶರದ್ ಪವಾರ್.2024ರಲ್ಲಿ 84 ಬಾರಿ ಇಂಟರ್ನೆಟ್ ಸ್ಥಗಿತ: ವಿಶ್ವದಲ್ಲೇ ಭಾರತ ಎರಡನೇ ಸ್ಥಾನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.