2004ರಿಂದ 2009ರ ಅವಧಿಯಲ್ಲಿ ಲಾಲು ಪ್ರಸಾದ್ ಯಾದವ್ ಅವರು ಕೇಂದ್ರ ರೈಲ್ವೆ ಸಚಿವರಾಗಿದ್ದರು. ಈ ವೇಳೆ ಲಾಲು ಕುಟುಂಬಕ್ಕೆ ಜಾಮೀನು ಮಾರಾಟ ಮಾಡಿದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ನೀಡಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಹಗರಣಕ್ಕೆ ಸಂಬಂಧಿಸಿ ಲಾಲು ಪ್ರಸಾದ್, ರಾಬ್ರಿ ದೇವಿ ಮತ್ತು ಇತರರ ವಿರುದ್ಧ 2022ರ ಮೇ 18ರಂದು ಸಿಬಿಐ ಪ್ರಕರಣ ದಾಖಲಿಸಿತ್ತು. ಬಳಿಕ ಇ.ಡಿ ಎಫ್‌ಐಆರ್ ದಾಖಲಿಸಿತು.