ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾಚಲ ಪ್ರದೇಶದ ಚಂಬಾದಲ್ಲಿ ಭೂಕುಸಿತ: ಸಾವಿನ ಸಂಖ್ಯೆ 5ಕ್ಕೆ ಏರಿಕೆ

Published 22 ಆಗಸ್ಟ್ 2023, 10:48 IST
Last Updated 22 ಆಗಸ್ಟ್ 2023, 10:48 IST
ಅಕ್ಷರ ಗಾತ್ರ

ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಅವಶೇಷಗಳ ಅಡಿಯಿಂದ ಮತ್ತೊಂದು ಮೃತದೇಹವನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ರಾತ್ರಿ ಐದನೇ ಶವ ಪತ್ತೆಯಾಗಿದ್ದು, ಮೃತ ವ್ಯಕ್ತಿಯನ್ನು ಕಿರ್ಗಾನಿ ಗ್ರಾಮದ 34 ವರ್ಷದ ಸೋಹನ್‌ ಸಿಂಗ್‌ ರಾವತ್‌ ಎಂದು ಗುರುತಿಸಲಾಗಿದೆ ಎಂದು ತೆಹ್ರಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಮಯೂರ್‌ ದೀಕ್ಷಿತ್‌ ಹೇಳಿದ್ದಾರೆ.

ಸೋಮವಾರ ಹಿಮಾಚಲ ಪ್ರದೇಶದ ಚಂಬಾ ಪಾರ್ಕಿಂಗ್‌ ಪ್ರದೇಶದಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ಓರ್ವ ಮಹಿಳೆ ಮತ್ತು ಆಕೆಯ ನಾಲ್ಕು ತಿಂಗಳ ಮಗು ಸೇರಿದಂತೆ ಐವರು ಜೀವಂತ ಸಮಾಧಿಯಾಗಿದ್ದಾರೆ. ಭೂ ಕುಸಿತ ಪ್ರದೇಶದಲ್ಲಿ ಸುಮಾರು 12 ಗಂಟೆಗಳ ಕಾಲ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು ಎಂದು ಅವರು ತಿಳಿಸಿದ್ದಾರೆ.

ಮಣ್ಣು ಕುಸಿದ ಪರಿಣಾಮ ಚಂಬಾ–ನ್ಯೂ ತೆಹ್ರಿ ಹೆದ್ದಾರಿಯನ್ನು ಮುಚ್ಚಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಚಂಬಾದಲ್ಲಿ ಭೂವೈಜ್ಞಾನಿಕ ಸಮೀಕ್ಷೆ ನಡೆಸಲು ಆದೇಶ ಹೊರಡಿಸಲಾಗಿದ್ದು, ಭೂಕುಸಿತ ಸಂಭವಿಸಿದ ಸ್ಥಳದ ಸಮೀಪವಿರುವ ಸೂಕ್ಷ್ಮ ಪ್ರದೇಶದಲ್ಲಿ ವಾಸಿಸುತ್ತಿದ್ದ ನಾಲ್ಕು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT