ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೇದಾರನಾಥ ಮಾರ್ಗದಲ್ಲಿ ಭೂಕುಸಿತ: ಮೃತರ ಸಂಖ್ಯೆ 5ಕ್ಕೆ ಏರಿಕೆ

Published : 10 ಸೆಪ್ಟೆಂಬರ್ 2024, 5:35 IST
Last Updated : 10 ಸೆಪ್ಟೆಂಬರ್ 2024, 5:35 IST
ಫಾಲೋ ಮಾಡಿ
Comments

ರುದ್ರಪ್ರಯಾಗ: ಕೇದಾರನಾಥ ಮಾರ್ಗದಲ್ಲಿ ಸೋಮವಾರ ಸಂಜೆ ಸಂಭವಿಸಿದ್ದ ಭೂಕುಸಿತದಲ್ಲಿ ಮೃತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅವಶೇಷಗಳಡಿಯಿಂದ ನಾಲ್ವರು ಯಾತ್ರಾರ್ಥಿಗಳು ಮೃತದೇಹಗಳನ್ನು ಇಂದು (ಮಂಗಳವಾರ) ಹೊರತೆಗೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮೃತರನ್ನು ಮಧ್ಯಪ್ರದೇಶದ ದುರ್ಗಾಭಾಯಿ ಖಾಪರ್ (50,) ಸಮನ್ ಭಾಯ್ (50), ಗುಜರಾತ್‌ನ ಭರತ್ ಭಾಯಿ ನಿರಾಲಾಲ್ (52) ಮತ್ತು ನೇಪಾಳದ ತಿತ್ಲಿ ದೇವಿ (70) ಎಂದು ಗುರುತಿಸಲಾಗಿದೆ.

ಅವಶೇಷಗಳಡಿಯಲ್ಲಿ ಇನ್ನಷ್ಟು ಯಾತ್ರಾರ್ಥಿಗಳು ಸಿಲುಕಿರುವ ಸಾಧ್ಯತೆಯಿದೆ ಎಂದು ರುದ್ರಪ್ರಯಾಗ ಪೊಲೀಸರು ತಿಳಿಸಿದ್ದಾರೆ.

ಕೇದಾರನಾಥಕ್ಕೆ ಭೇಟಿ ನೀಡಿದ್ದ ಯಾತ್ರಾರ್ಥಿಗಳ ತಂಡವೊಂದು ಸೋಮವಾರ ರಾತ್ರಿ 7.20ರ ಸುಮಾರಿಗೆ ಹಿಂದಿರುಗುತ್ತಿದ್ದ ವೇಳೆ ಭೂಕುಸಿತಕ್ಕೆ ಸಿಲುಕಿಕೊಂಡಿದ್ದರು.

ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್‌) ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿತ್ತು.

ಮಧ್ಯಪ್ರದೇಶದ ಗೋಪಾಲ್ (50) ಎಂಬವರ ಮೃತದೇಹ ಹೊರತೆಗೆಯಲಾಗಿತ್ತು. ಮೂವರನ್ನು ರಕ್ಷಣೆ ಮಾಡಲಾಗಿತ್ತು.

ಪ್ರತಿಕೂಲ ಹವಾಮಾನ, ಗುಡ್ಡಜರಿತದಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡಚಣೆಯುಂಟಾಗಿತ್ತು.

ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ದುರಂತಕ್ಕೆ ಸಂತಾಪ ಸೂಚಿಸಿದ್ದಾರೆ.

ಕೇದಾರನಾಥ ಮಾರ್ಗದಲ್ಲಿ ಭೂಕುಸಿತ

ಕೇದಾರನಾಥ ಮಾರ್ಗದಲ್ಲಿ ಭೂಕುಸಿತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT