ಮುಂಬೈ: ಪಂಜಾಬ್ನ ಅಮೃತಸರದಲ್ಲಿ ಗಣರಾಜ್ಯೋತ್ಸವ ದಿನ ದುಷ್ಕರ್ಮಿಗಳು ಅಂಬೇಡ್ಕರ್ ಪ್ರತಿಮೆಗೆ ಹಾನಿ ಮಾಡಿರುವುದರ ಕುರಿತು ಪ್ರತಿಕ್ರಿಯಿಸಿರುವ ವಂಚಿತ್ ಬಹುಜನ ಅಘಾಡಿ ಪಕ್ಷದ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್, ‘ಸಂವಿಧಾನ ಬದಲಿಸಿ ಮನುಸ್ಮೃತಿ ಮರು ಪರಿಚಯಿಸಲು ರಾಷ್ಟ್ರದಾದ್ಯಂತ ದೊಡ್ಡ ಷಡ್ಯಂತ್ರ ನಡೆಯುತ್ತಿದೆ’ ಎಂದು ಹೇಳಿದ್ದಾರೆ.

‘ದೇಶದಾದ್ಯಂತ ಸಂವಿಧಾನ ಮತ್ತು ಅಂಬೇಡ್ಕರ್ ಪ್ರತಿಮೆ ಧ್ವಂಸ ಪ್ರಕರಣಗಳು ಹೆಚ್ಚುತ್ತಿದ್ದು, ಈ ಬಗ್ಗೆ ಸೂಕ್ತ ತನಿಖೆಯಾಗಬೇಕು’ ಎಂದು ಒತ್ತಾಯಿಸಿದ್ದಾರೆ.

‘ಸಂವಿಧಾನ ಬದಲಿಸಿ ಮನುಸ್ಮೃತಿ ಪರಿಚಯಿಸಲು ಷಡ್ಯಂತ್ರ ನಡೆಯುತ್ತಿದೆ. ಸಂವಿಧಾನ ಮತ್ತು ಅಂಬೇಡ್ಕರ್ ಪ್ರತಿಮೆಗಳನ್ನು ಧ್ವಂಸ ಮಾಡುತ್ತಿರುವುದು ಇದಕ್ಕೆ ನಿದರ್ಶನವಾಗಿದೆ’ ಎಂದು ಹೇಳಿದ್ದಾರೆ.

‘ಅಂಬೇಡ್ಕರ್ ಪ್ರತಿಮೆಗೆ ಹಾನಿ ಮಾಡುವುದು ಕ್ರಿಮಿನಲ್ ಕೃತ್ಯಕ್ಕಿಂತ ದೊಡ್ಡದು. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಾಮಾಜಿಕ ಸುಧಾರಣೆ, ರಾಜಕೀಯ ತತ್ವಶಾಸ್ತ್ರ ಮತ್ತು ಶ್ರೀಮಂತ ಪರಂಪರೆಯನ್ನು ತಿರಸ್ಕರಿಸುವವರಿಂದ ಇಂತಹ ಕೆಲಸಗಳು ನಡೆಯುತ್ತಿವೆ’ ಎಂದು ಅಸಮಾಧಾನ ಹೊರಹಾಕಿದ್ದಾರೆ.

‘ಇಂತಹ ಘಟನೆಗಳು ಆಘಾತ ಉಂಟು ಮಾಡುತ್ತಿವೆ. ಆದರೆ ಇದಕ್ಕಿಂತಲೂ ಆಘಾತವಾಗುತ್ತಿರುವುದು ಅಂಬೇಡ್ಕರ್ ಅಧ್ಯಕ್ಷತೆಯಲ್ಲಿ ರಚಿಸಲಾದ ಸಂವಿಧಾನವನ್ನು ಭಾರತವು ಅಂಗೀಕರಿಸಿದ ದಿನವಾದ, ವಸಾಹತುಶಾಹಿ ಮತ್ತು ಮನುಸ್ಮೃತಿ ಆಡಳಿತದಿಂದ ಮುಕ್ತಗೊಂಡ ದಿನವಾದ ಗಣರಾಜ್ಯೋತ್ಸವದ ದಿನವೇ ಅಂಬೇಡ್ಕರ್ ಪ್ರತಿಮೆಗೆ ಹಾನಿಮಾಡಲಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಎಎಪಿ ನೇತೃತ್ವದ ಪಂಜಾಬ್ ಸರ್ಕಾರವು ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕೊಳ್ಳುವ ಮೂಲಕ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.