ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಬಿಜೆಪಿಗೆ ಸಾವಿರಕ್ಕೂ ಅಧಿಕ ಸಿಖ್ಖರ ಸೇರ್ಪಡೆ

Published 27 ಏಪ್ರಿಲ್ 2024, 16:02 IST
Last Updated 27 ಏಪ್ರಿಲ್ 2024, 16:02 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ (ಡಿಎಸ್‌ಜಿಎಂಸಿ) ಸದಸ್ಯರು ಸೇರಿದಂತೆ ಸಿಖ್ ಸಮುದಾಯದ ಸಾವಿರಕ್ಕೂ ಹೆಚ್ಚು ಮಂದಿ ಶನಿವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಕ್ಷವು ಈ ಬಗ್ಗೆ ಪ್ರಕಟಣೆ ನೀಡಿದೆ.

ಅಲ್ಪಸಂಖ್ಯಾತರಿಗಾಗಿ ಮೋದಿ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದೆ ಎಂದಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕರ್ತಾರ್‌ಪುರ ಸಾಹಿಬ್ ಕಾರಿಡಾರ್, ಸ್ವರ್ಣಮಂದಿರಕ್ಕೆ ನೀಡುವ ದೇಣಿಗೆಗಳಿಗಾಗಿ ಎಫ್‌ಸಿಆರ್‌ಎ ನೋಂದಣಿ, 1984ರ ಸಿಖ್ ವಿರೋಧಿ ಗಲಭೆ ಪ್ರಕರಣದ ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿದ್ದನ್ನು ಉಲ್ಲೇಖಿಸಿದ್ದಾರೆ.

ಸಿಖ್ಖರ ಬಗ್ಗೆ ವಿಶೇಷ ಗಮನ ಹರಿಸಿರುವ ಬಿಜೆಪಿಯು, ಸಮುದಾಯ ಪ್ರಬಲವಾಗಿರುವ ಪಂಜಾಬ್‌ನಲ್ಲಿ ಲೋಕಸಭಾ ಚುನಾವಣೆಯಲ್ಲಿ ತೀವ್ರ ಸ್ಪರ್ಧೆಯೊಡ್ಡಲು ಮುಂದಾಗಿದೆ. ರಾಜ್ಯದ ಖ್ಯಾತನಾಮ ಸಿಖ್ ಮುಖಂಡರು ಈಚೆಗೆ ಬಿಜೆಪಿ ಸೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT