ಮಂಗಳವಾರ, 5 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಲ್ವಾಮ: ಲಷ್ಕರ್‌ ಎ ತಯಬಾ ಉಗ್ರನ ಬಂಧನ

Last Updated 1 ಅಕ್ಟೋಬರ್ 2021, 12:55 IST
ಅಕ್ಷರ ಗಾತ್ರ

ಶ್ರೀನಗರ: ‘ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಶುಕ್ರವಾರ ಲಷ್ಕರ್‌ ಎ ತಯಬಾ (ಎಲ್‌ಇಟಿ) ಸಂಘಟನೆಗೆ ಸೇರಿದ ಉಗ್ರನೊಬ್ಬನನ್ನು ಭದ್ರತಾ ಪಡೆಗಳು ಬಂಧಿಸಿವೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಬಂಧಿತ ಉಗ್ರನನ್ನು ದಕ್ಷಿಣ ಕಾಶ್ಮೀರದ ನಿಕ್ಲೂರಾ ಪ್ರದೇಶದ ನಿವಾಸಿ ಶಮೀಮ್ ಸೋಫಿ ಎಂದು ಗುರುತಿಸಲಾಗಿದೆ. ಈತ ಎಲ್ಇಟಿ ಜೊತೆಗೆ ನಂಟು ಹೊಂದಿದ್ದಾನೆ’ ಎಂದೂ ಅವರು ಮಾಹಿತಿ ನೀಡಿದ್ದಾರೆ.

‘ಬಂಧಿತನಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಸೇರಿದಂತೆ ಅಪರಾಧ ಕೃತ್ಯಕ್ಕೆ ಬಳಸಲಾಗುವ ವಸ್ತಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದೂ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT