ನವದೆಹಲಿ: ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಮನಮೋಹನ ಸಿಂಗ್ (92) ಅವರು ಗುರುವಾರ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ನಾಳೆ (ಶನಿವಾರ) ನಡೆಯಲಿದೆ ಎಂದು ಕಾಂಗ್ರೆಸ್ ತಿಳಿಸಿದೆ.

ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರ ಅಂತಿಮ ಸಂಸ್ಕಾರ ನಾಳೆ ನಡೆಯಲಿದೆ. ಈ ಬಗ್ಗೆ ನಾವು ಇಂದು(ಶುಕ್ರವಾರ) ಅಧಿಕೃತವಾಗಿ ಘೋಷಿಸುತ್ತೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಗುರುವಾರ ತಡರಾತ್ರಿ ದೆಹಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈ ಬಗ್ಗೆ 'ಎನ್ಡಿ ಟಿವಿ' ವರದಿ ಮಾಡಿದೆ.
.Manmohan Singh: ಅರ್ಥಮಾಂತ್ರಿಕ ಅಸ್ತಂಗತ.
ಇನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಗೌರವಾರ್ಥ, ಮುಂದಿನ ಏಳು ದಿನಗಳಲ್ಲಿ ನಿಗದಿಯಾಗಿದ್ದ ಸ್ಥಾಪನಾ ದಿನ ಸೇರಿ ಎಲ್ಲ ಅಧಿಕೃತ ಕಾರ್ಯಕ್ರಮಗಳನ್ನು ರದ್ದು ಮಾಡುವುದಾಗಿ ಕಾಂಗ್ರೆಸ್ ತಿಳಿಸಿದೆ.

ಅಂತಿಮ ದರ್ಶನ ಪಡೆದ ಕಾಂಗ್ರೆಸ್ ನಾಯಕರು

ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಏಮ್ಸ್ನಿಂದ ಗುರುವಾರ ತಡರಾತ್ರಿ ಮೋತಿಲಾಲ್ ನೆಹರು ಮಾರ್ಗದಲ್ಲಿರುವ ಅವರ ನಿವಾಸಕ್ಕೆ ತರಲಾಗಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದೆ. ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ನ ಹಿರಿಯ ನಾಯಕರು ಅಂತಿಮ ದರ್ಶನ ಪಡೆದಿದ್ದಾರೆ.
.ಮನಮೋಹನ ಸಿಂಗ್ ನಿಧನ: ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ರಾಹುಲ್, ಖರ್ಗೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.