ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮ ಮಂದಿರ ಉದ್ಘಾಟನೆಗೆ ಸಕಲ ಸಿದ್ಧತೆ: ವಿಡಿಯೊ ಹಂಚಿಕೊಂಡ ರಾಮ ಜನ್ಮಭೂಮಿ ಟ್ರಸ್ಟ್

Published 8 ಜನವರಿ 2024, 16:22 IST
Last Updated 8 ಜನವರಿ 2024, 16:22 IST
ಅಕ್ಷರ ಗಾತ್ರ

ನವದೆಹಲಿ: ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆಯಲಿರುವ ರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ನಿರ್ಮಾಣ ಹಂತದಲ್ಲಿರುವ ರಾಮ ಮಂದಿರದ ಇತ್ತೀಚಿನ ದೃಶ್ಯಗಳನ್ನು ಒಳಗೊಂಡ ವಿಡಿಯೊವನ್ನು ರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ‘ಎಕ್ಸ್‌’ನಲ್ಲಿ ಹಂಚಿಕೊಂಡಿದೆ.

ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ರಾಮ ಮಂದಿರದ ನಿರ್ಮಾಣ ಹಂತ ಕಾಮಗಾರಿಗಳಿಗೆ ಅಂತಿಮ ಸ್ಪರ್ಶ ನೀಡುತ್ತಿರುವ ಚಿತ್ರಣವನ್ನು ವಿಡಿಯೊದಲ್ಲಿ ನೋಡಬಹುದಾಗಿದೆ.

ಜಗತ್ತಿನಾದ್ಯಂತ ಲಕ್ಷಾಂತರ ರಾಮಭಕ್ತರ ಆರಾಧ್ಯ ದೈವವನ್ನು ಸ್ವಾಗತಿಸಲು ಪ್ರಭು ಶ್ರೀ ರಾಮಲಲ್ಲಾನ ಪವಿತ್ರ ಗರ್ಭಗುಡಿಯು ವೈಭವದಿಂದ ಸಿದ್ಧವಾಗುತ್ತಿದೆ ಎಂದು ರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT