ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಶಕದಿಂದ ಇತ್ಯರ್ಥವಾಗದ 10 ಸಾವಿರಕ್ಕೂ ಅಧಿಕ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ

Last Updated 4 ಆಗಸ್ಟ್ 2022, 15:48 IST
ಅಕ್ಷರ ಗಾತ್ರ

ನವದೆಹಲಿ:ಸುಪ್ರೀಂ ಕೋರ್ಟ್‌ನಲ್ಲಿ 71 ಸಾವಿರಕ್ಕೂ ಅಧಿಕ ಪ್ರಕರಣಗಳು ಬಾಕಿ ಉಳಿದಿದ್ದು, ಅದರಲ್ಲಿ 10 ಸಾವಿರಕ್ಕಿಂತ ಹೆಚ್ಚು ಪ್ರಕರಣಗಳು ದಶಕದಿಂದಲೂ ಇತ್ಯರ್ಥವಾಗಿಲ್ಲ ಎಂದು ಕಾನೂನು ಸಚಿವ ಕಿರಣ್‌ ರಿಜುಜು ಗುರುವಾರ ತಿಳಿಸಿದ್ದಾರೆ.

ರಾಜ್ಯಸಭೆಗೆಲಿಖಿತ ಉತ್ತರ ನೀಡಿರುವ ರಿಜುಜು, ಆಗಸ್ಟ್‌ 2ರ ವೇಳೆಗೆ ಸುಪ್ರೀಂ ಕೋರ್ಟ್‌ನಲ್ಲಿ71,411 ಪ್ರಕರಣಗಳು ಬಾಕಿ ಇವೆ. ಇದರಲ್ಲಿ56 ಸಾವಿರಕ್ಕೂ ಅಧಿಕ ನಾಗರಿಕ ವಿವಾದಗಳು ಮತ್ತು 15 ಸಾವಿರಕ್ಕಿಂತ ಹೆಚ್ಚು ಕ್ರಿಮಿನಲ್‌ ಪ್ರಕರಣಗಳಾಗಿವೆ ಎಂದು ತಿಳಿಸಿದ್ದಾರೆ.

10,491 ಪ್ರಕರಣಗಳು 10 ವರ್ಷಗಳಿಗೂ ಹೆಚ್ಚು ಸಮಯದಿಂದ,18,134 ಐದರಿಂದ ಹತ್ತು ವರ್ಷಗಳಿಂದ ಇತ್ಯರ್ಥವಾಗಿಲ್ಲ. ಉಳಿದಂತೆ42 ಸಾವಿರಕ್ಕಿಂತ ಹೆಚ್ಚು ಪ್ರಕರಣಗಳು5 ವರ್ಷಗಳಿಂದ ಈಚೆಗೆ ದಾಖಲಾಗಿವೆ ಎಂದು ಮಾಹಿತಿ ನೀಡಿದ್ದಾರೆ.

ಒಟ್ಟಾರೆಯಾಗಿ ದೇಶದ ವಿವಿಧ ಹೈಕೋರ್ಟ್‌ಗಳಲ್ಲಿ 2016ರಲ್ಲಿ40,28,591 ಪ್ರಕರಣಗಳು ಬಾಕಿ ಇದ್ದವು. ಅವುಗಳ ಸಂಖ್ಯೆಯಲ್ಲಿ ಜುಲೈ 29ರ ವೇಳೆಗೆ ಶೇ 50 ರಷ್ಟು ಏರಿಕೆಯಾಗಿ,59,55,907ಕ್ಕೆ ತಲುಪಿವೆ. 2016ರಿಂದ ಈ ವರ್ಷದ ಜುಲೈ 29ರ ಅವಧಿಯಲ್ಲಿ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿಯೂ ಇತ್ಯರ್ಥವಾಗದ ಪ್ರಕರಣಗಳಲ್ಲಿ ಶೇ 50ರಷ್ಟು ಏರಿಕೆಯಾಗಿದೆ ಎಂದು ಮತ್ತೊಂದು ಪ್ರಶ್ನೆಗೆ ಕಿರಣ್‌ ಪ್ರತಿಕ್ರಿಯಿಸಿದ್ದಾರೆ.

ದೇಶದ ವಿವಿಧ ನ್ಯಾಯಾಲಯಗಳಲ್ಲಿ ಪ್ರಕರಣ ದಾಖಲಿಸುವುದು ಹಾಗೂ ಇತ್ಯರ್ಥ ಪಡಿಸುವುದು ನಿರಂತರ ಪ್ರಕ್ರಿಯೆಯಾಗಿದ್ದರೂ, ಪ್ರಕರಣಗಳ ವಿಲೇವಾರಿಗೆ ಯಾವುದೇ ನ್ಯಾಯಾಲಯಕ್ಕೂ ಕಾಲಮಿತಿ ನಿಗದಿಪಡಿಸಿಲ್ಲ ಎಂದೂ ಸಚಿವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT