ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಾನೂನು ಜಾರಿ: ದೇವೇಂದ್ರ ಫಡಣವೀಸ್

Published 1 ಜುಲೈ 2024, 12:33 IST
Last Updated 1 ಜುಲೈ 2024, 12:33 IST
ಅಕ್ಷರ ಗಾತ್ರ

ಮುಂಬೈ: ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವ ನಿಟ್ಟಿನಲ್ಲಿ ಕಾನೂನು ಜಾರಿಮಾಡಲು ರೂಪಿಸಿರುವ ಮಸೂದೆಯನ್ನು ಈಗ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲೇ ಮಂಡಿಸಲಾಗುವುದು ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಅವರು ಸೋಮವಾರ ಹೇಳಿದರು.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಸರ್ಕಾರಿ ಉದ್ಯೋಗಗಳ ನೇಮಕಾತಿ ಕುರಿತು ಪ್ರಶ್ನೆಗಳನ್ನು ಕೇಳಲಾಯಿತು. ಅದೇ ಸಮಯದಲ್ಲಿ, ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವ ನಿಟ್ಟಿನಲ್ಲಿ ಸರ್ಕಾರವು ಕಠಿಣ ಕಾನೂನನ್ನು ರೂಪಿಸಲಿದೆಯೇ ಎಂದು ವಿರೋಧ ಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ ಆಘಾಡಿಯ ಶಾಸಕರು ಮತ್ತು ಬಿಜೆಪಿಯ ಒಬ್ಬ ಶಾಸಕರು ಪ್ರಶ್ನಿಸಿದರು. ಆಗ ಫಡಣವೀಸ್‌ ಅವರು ಈ ಹೇಳಿಕೆ ನೀಡಿದರು.

ನೀಟ್–ಯುಜಿ ಹಗರಣ ಸೇರಿ ಹಲವು ಪರೀಕ್ಷಾ ಅಕ್ರಮಗಳು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ, ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಕಠಿಣ ಕಾನೂನನ್ನು ಜಾರಿಗೊಳಿಸಬೇಕು ಎಂದು ಕಾಂಗ್ರೆಸ್‌ನ ಮಹಾರಾಷ್ಟ್ರ ಘಟಕದ ಮುಖ್ಯಸ್ಥ ನಾನಾ ಪಟೋಲೆ ಅವರು ಶನಿವಾರ ಆಗ್ರಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT