ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೋದಿ ನಾಯಕತ್ವದಲ್ಲಿ ಭಾರತವು ವಿಶ್ವದ ಪ್ರಮುಖ ಶಕ್ತಿಯಾಗಿದೆ: ಜೆ.ಪಿ. ನಡ್ಡಾ

Published 23 ಫೆಬ್ರುವರಿ 2024, 14:34 IST
Last Updated 23 ಫೆಬ್ರುವರಿ 2024, 14:34 IST
ಅಕ್ಷರ ಗಾತ್ರ

ಬಿಲಾಸ್‌ಪುರ: ‘ಅಭಿವೃದ್ಧಿ ಮತ್ತು ಬೆಳವಣಿಗೆಗೆ ಒಳ್ಳೆಯ ನಾಯಕತ್ವ ಮುಖ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತವು ವಿಶ್ವದ ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಶುಕ್ರವಾರ ಇಲ್ಲಿ ಹೇಳಿದರು.

ಬಿಲಾಸ್‌ಪುರದ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನಲ್ಲಿ (ಎಐಐಎಂಎಸ್) ನಡೆದ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು.

ದೇಶದ 140 ಕೋಟಿ ಜನರ ಏಳಿಗೆಗಾಗಿ ಸತತ ಮೂರನೇ ಅವಧಿಗೆ ಮೋದಿಯವರು ಪ್ರಧಾನಿಯಾಗಬೇಕು. ಇದಕ್ಕಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜನತೆಯು ಬಿಜೆಪಿಯನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.   

ದೇಶದ ಆರೋಗ್ಯ ಮೂಲಸೌಕರ್ಯ ಬಲಪಡಿಸಲು ಕೇಂದ್ರವು ಸರ್ವಪ್ರಯತ್ನ ಮಾಡುತ್ತಿದೆ. ರೋಗ ತಡೆಗಟ್ಟುವಿಕೆ, ಚಿಕಿತ್ಸೆ ಮತ್ತು ಪುನಶ್ಚೇತನ ಚಟುವಟಿಕೆಗಳಿಗಾಗಿ ಮೂವತ್ತರ ಹರೆಯದ ಜನರ ಮೇಲೆ ಗಮನ ಕೇಂದ್ರೀಕರಿಸಲಾಗಿದೆ ಎಂದೂ ಹೇಳಿದರು.

ಕೇಂದ್ರ ಸಚಿವರಾದ ಮನ್ಸುಖ್ ಮಾಂಡವಿಯಾ ಮತ್ತು ಅನುರಾಗ್ ಠಾಕೂರ್ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT