ನವದೆಹಲಿ: ಭಾರತದ ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್ ಅವರು ಮಂಗಳವಾರ(ಮಾ.31) ಭಾರತೀಯ ಜನತಾ ಪಾರ್ಟಿ(ಬಿಜೆಪಿ) ಸೇರ್ಪಡೆಯಾಗಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನವೇ ಲಿಯಾಂಡರ್ ಪೇಸ್, ಬಿಜೆಪಿ ಸೇರಿಕೊಂಡಿದ್ದಾರೆ.

ಈ ವೇಳೆ ಕೇಂದ್ರ ಸಚಿವ ಕಿರಣ್ ರಿಜಿಜು ಹಾಗೂ ಬಿಜೆಪಿ ಹಿರಿಯ ನಾಯಕರು ಉಪಸ್ಥಿತರಿದ್ದರು.

ಇತ್ತೀಚೆಗೆ ಲಿಯಾಂಡರ್ ಪೇಸ್ ಅವರು ಕೋಲ್ಕತ್ತದಲ್ಲಿ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್ ಅವರನ್ನು ಭೇಟಿಯಾಗಿದ್ದರು. ಆ ಬಳಿಕ ಅವರು ಬಿಜೆಪಿ ಸೇರಬಹುದು ಎಂದು ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿತ್ತು.

ಲಿಯಾಂಡರ್ ಪೇಸ್ ಅವರು 2021ರಲ್ಲಿ ಟಿಎಂಸಿ ಸೇರ್ಪಡೆಯಾಗಿದ್ದರು. 2022ರ ಗೋವಾ ಚುನಾವಣೆಯ ವೇಳೆ ಪಕ್ಷದ ಪರ ಪ್ರಚಾರ ಮಾಡಿದ್ದರು. ಆದರೆ, ಇದುವರೆಗೂ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ.

ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳಿಗೆ ಏ.23 ಹಾಗೂ ಏ.29ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಮೇ.4ರಂದು ಮತ ಎಣಿಕೆ ಪ್ರಕ್ರಿಯೆ ಜರುಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.