ನವದೆಹಲಿ: ‘ಎಡಪಂಥೀಯ ಚಳವಳಿಯು ಎದುರಿಸುತ್ತಿರುವ ಸವಾಲುಗಳ ಕುರಿತು ಚರ್ಚಿಸಲು ಮತ್ತು ಸಾಮಾನ್ಯ ಕಾರ್ಯಸೂಚಿಯನ್ನು ರೂಪಿಸಲು ನವದೆಹಲಿಯಲ್ಲಿ ಶೀಘ್ರದಲ್ಲೇ ಸಭೆ ಸೇರಬೇಕು ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ. ರಾಜಾ ಅವರು ಎಡ ಪಕ್ಷಗಳಿಗೆ ಪತ್ರ ಬರೆದಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

‘ಸಿಪಿಎಂ ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ, ಸಿಪಿಎಂಎಲ್ನ ದೀಪಂಕರ್ ಭಟ್ಟಾಚಾರ್ಯ, ಫಾರ್ವರ್ಡ್ ಬ್ಲಾಕ್ನ ಜಿ. ದೇವರಾಜನ್ ಮತ್ತು ಆರ್ಎಸ್ಪಿಯ ಮನೋಜ್ ಭಟ್ಟಾಚಾರ್ಯ ಅವರಿಗೆ ಪತ್ರ ಬರೆದಿದ್ದು, ಶೀಘ್ರದಲ್ಲೇ ಸಭೆಯ ದಿನಾಂಕ ನಿಗದಿಯಾಗಲಿದೆ’ ಎಂದು ತಿಳಿಸಲಾಗಿದೆ. ದೇಶವು ರಾಜಕೀಯ ಸವಾಲು, ಆರ್ಥಿಕ ಹಾಗೂ ಸಾಮಾಜಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಈ ಸಭೆ ಸಕಾಲಿಕ ಹಾಗೂ ಅತ್ಯಗತ್ಯವೂ ಆಗಿದೆ ಎಂದು ರಾಜಾ ಅವರು ತಿಳಿಸಿದ್ದಾರೆ. ಜೂನ್ ಮೊದಲ ವಾರದಲ್ಲೇ ದೆಹಲಿಯಲ್ಲಿ ಸಭೆ ಸೇರುವ ಕುರಿತು ಅವರು ಪ್ರಸ್ತಾಪಿಸಿದ್ದಾರೆ. ಅದಕ್ಕೂ ಪೂರ್ವದಲ್ಲಿ ಪಕ್ಷಗಳ ಪ್ರಮುಖರ ಅನೌಪಚಾರಿಕ ಭೇಟಿಯೂ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-51-859073937

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.