ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ | ಮನೆಗೆ ನುಗ್ಗಿ ಸಿಕ್ಕವರಿಗೆ ಪರಚಿದ ಚಿರತೆ: ಐವರಿಗೆ ಗಾಯ

Published 1 ಏಪ್ರಿಲ್ 2024, 5:27 IST
Last Updated 1 ಏಪ್ರಿಲ್ 2024, 5:27 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯ ರೂಪ ನಗರ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ಚಿರತೆಯೊಂದು ಮನೆಗೆ ನುಗ್ಗಿದ್ದು, ಐವರನ್ನು ಘಾಸಿಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಿಗ್ಗೆ 6.20 ರ ಸುಮಾರಿಗೆ ಘಟನೆ ನಡೆದಿದೆ. ಈ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ಅಧಿಕಾರಿಗಳು ಸ್ಥಳೀಯರ ಸಹಾಯದಿಂದ ಚಿರತೆಯನ್ನು ಸೆರೆ ಹಿಡಿದಿದ್ದಾರೆ. ‌ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ವಿಭಾಗದ ಮುಖ್ಯಸ್ಥ ಅತುಲ್ ಗಾರ್ಗ್ ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಕೂಡ ಆಗಮಿಸಿದ್ದು, ಅರಣ್ಯ ಇಲಾಖೆಗೂ ಮಾಹಿತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT