ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರ: ಬ್ಯಾಂಕ್‌ ಮ್ಯಾನೇಜರ್‌ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರನ ಎನ್‌ಕೌಂಟರ್‌

Last Updated 15 ಜೂನ್ 2022, 2:02 IST
ಅಕ್ಷರ ಗಾತ್ರ

ಶ್ರೀನಗರ:ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಲಷ್ಕರ್‌–ಎ–ತಯಬಾ (ಎಲ್‌ಇಟಿ) ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಕುಲ್ಗಾಮ್‌ನಲ್ಲಿ ನಡೆದಿದ್ದ ಬ್ಯಾಂಕ್‌ ಮ್ಯಾನೇಜರ್‌ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರನೊಬ್ಬ ಎನ್‌ಕೌಂಟರ್‌ ಆಗಿರುವುದಾಗಿ ಕಾಶ್ಮೀರ ವಲಯದ ಐಜಿಪಿ ವಿಜಯ್‌ ಕುಮಾರ್‌ ಹೇಳಿದ್ದಾರೆ. ಆತನನ್ನು ಜಾನ್‌ ಮೊಹಮ್ಮದ್‌ ಲೋನ್‌ ಎಂದು ಗುರುತಿಸಲಾಗಿದೆ.

ಬುಧವಾರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆದಿದೆ. ಕಾಶ್ಮೀರಿ ಪಂಡಿತರು, ಹಿಂದೂ ಸಮುದಾಯದ ವಲಸಿಗರು ಹಾಗೂ ಸರ್ಕಾರಿ ಉದ್ಯೋಗಿಗಳನ್ನು ಗುರಿಯಾಗಿಸಿ ಉಗ್ರರು ಹತ್ಯೆ ನಡೆಸುತ್ತಿದ್ದಾರೆ.

'ಹತ್ಯೆಯಾಗಿರುವ ಉಗ್ರರ ಪೈಕಿ ಒಬ್ಬ ಶೋಪಿಯಾನ್‌ನ ಜಾನ್‌ ಮೊಹಮ್ಮದ್‌ ಲೋನ್‌ ಎಂದು ಗುರುತಿಸಲಾಗಿದೆ. ಇತರೆ ಭಯೋತ್ಪಾದನಾ ಚಟುವಟಿಕೆಗಳ ಜೊತೆಗೆ ಕುಲ್ಗಾಮ್‌ ಜಿಲ್ಲೆಯಲ್ಲಿ 2/6/2022ರಂದು ನಡೆದ ಬ್ಯಾಂಕ್‌ ಮ್ಯಾನೇಜರ್ ವಿಜಯ್‌ ಕುಮಾರ್‌ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದ' ಎಂದು ಕಾಶ್ಮೀರ ಪೊಲೀಸ್‌ ಟ್ವಿಟರ್‌ ಖಾತೆಯಲ್ಲಿ ಪ್ರಕಟಿಸಲಾಗಿದೆ.

ಅಮರನಾಥ ಯಾತ್ರೆ ವೇಳೆ ದಾಳಿಗೆ ಸಂಚು ರೂಪಿಸಿದ್ದ ಎಲ್‌ಇಟಿಯ ಇಬ್ಬರು ಸೇರಿದಂತೆ ಮೂವರು ಉಗ್ರರನ್ನು ಶ್ರೀನಗರದ ಬೆಮಿನಾದಲ್ಲಿ ಮಂಗಳವಾರ ಬೆಳಿಗ್ಗೆ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿತ್ತು. ಜೂನ್‌ 30ರಿಂದ ಅಮರನಾಥ ಯಾತ್ರೆ ಆರಂಭವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT