ನವದೆಹಲಿ: ದೆಹಲಿ ಸರ್ಕಾರದ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸೆಕ್ಸೇನಾ ಅವರ ಮಾನಹಾನಿ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರಿಗೆ ವಿಧಿಸಲಾದ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ಎತ್ತಿ ಹಿಡಿದಿದೆ.

ಶಿಕ್ಷೆ ಪ್ರಕಟಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ರದ್ದುಪಡಿಸುವಂತೆ ಕೋರಿ ಹೈಕೋರ್ಟ್ನಲ್ಲಿ ಮೇಧಾ ಮನವಿ ಸಲ್ಲಿಸಿದ್ದರು. ’ಈ ಪ್ರಕರಣದಲ್ಲಿ ಯಾವುದೇ ಹಸ್ತಕ್ಷೇಪದ ಅಗತ್ಯವಿಲ್ಲ’ ಎಂದು ವಿಚಾರಣೆ ನಡೆಸಿದ ನ್ಯಾ. ಶೈಲೇಂದ್ರ ಕೌರ್ ಅವರು ಅಭಿಪ್ರಾಯಪಟ್ಟರು.

‘ಸೆಷನ್ಸ್ ನ್ಯಾಯಾಲಯದ ಆದೇಶದಲ್ಲಿ ಯಾವುದೇ ಅಕ್ರಮವಾಗಿಲ್ಲ. ಇದರಲ್ಲಿ ಯಾವುದೇ ಹಸ್ತಕ್ಷೇಪದ ಅಗತ್ಯವಿಲ್ಲ. ಹೀಗಾಗಿ ಅರ್ಜಿಯನ್ನು ವಜಾಗೊಳಿಸಲಾಗುತ್ತಿದೆ’ ಎಂದು ಪೀಠ ಹೇಳಿತು.

ಗುಜರಾತ್ನಲ್ಲಿ ಎನ್ಜಿಒ ನಡೆಸುತ್ತಿದ್ದ ಸೆಕ್ಸೆನಾ ಅವರು 23 ವರ್ಷಗಳ ಹಿಂದೆ ಮೇಧಾ ಪಾಟ್ಕರ್ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದರು.
.ಕ್ರಿಮಿನಲ್ ಮಾನನಷ್ಟ ಪ್ರಕರಣ: ಮೇಧಾ ಪಾಟ್ಕರ್ಗೆ ವಿಧಿಸಲಾಗಿದ್ದ ಶಿಕ್ಷೆ ಅಮಾನತು.24 ವರ್ಷಗಳ ಹಿಂದಿನ ಮಾನನಷ್ಟ ಪ್ರಕರಣ: ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.