ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮ ಮಂದಿರ ಉದ್ಘಾಟನೆ: ದೆಹಲಿ ಸರ್ಕಾರಿ ಕಚೇರಿಗಳಿಗೆ ಜನವರಿ 22ರಂದು ಅರ್ಧದಿನ ರಜೆ

Published 20 ಜನವರಿ 2024, 14:07 IST
Last Updated 20 ಜನವರಿ 2024, 14:07 IST
ಅಕ್ಷರ ಗಾತ್ರ

ನವದೆಹಲಿ: ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22ರಂದು ನಡೆಯುವ ಶ್ರೀ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಅಂಗವಾಗಿ ದೆಹಲಿಯ ಎಲ್ಲ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಿಸಲಾಗಿದೆ.

ಮುಖ್ಯ ಯಜಮಾನರಾಗಿ ಪಾಲ್ಗೊಳ್ಳುವ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಸಾವಿರಾರು ಗಣ್ಯರು ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸ್ಥಳೀಯ ನಾಗರಿಕ ಸಂಸ್ಥೆಗಳೂ ಸೇರಿದಂತೆ ಎಲ್ಲ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ನೀಡುವ ಪ್ರಸ್ತಾವನೆಯನ್ನು ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ.ಸಕ್ಸೇನಾ ಅವರು ಅನುಮೋದಿಸಿದ್ದಾರೆ.

ಏತನ್ಮಧ್ಯೆ, ಸರ್ಕಾರಿ ಕಚೇರಿಗಳಿಗೆ ಜನವರಿ 22ರಂದು ಮಧ್ಯಾಹ್ನ 2.30ರವರೆಗೆ ರಜೆ ನೀಡುವಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರೂ ಆದೇಶಿಸಿದ್ದಾರೆ ಎಂದು ಸರ್ಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT