ಲಿಂಗಸುಗೂರು: ದೇಶ ಈ ಹಿಂದೆ ಬರಗಾಲವನ್ನು ಎದುರಿಸಿದಾಗ ಆಹಾರದ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಡಾ.ಬಾಬು ಜಗಜೀವನರಾಂ ಅವರ ಕೊಡುಗೆ ಅಪಾರವಾಗಿದೆ ಎಂದು ಉಪವಿಭಾಗಾಧಿಕಾರಿ ಬಸವಣಪ್ಪ ಕಲಶೆಟ್ಟಿ ಹೇಳಿದರು.

ಪಟ್ಟಣದ ಡಾ.ಅಂಬೇಡ್ಕರ್ ಭವನದಲ್ಲಿ ಭಾನುವಾರ ತಾಲ್ಲೂಕು ಆಡಳಿತ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನರಾಂ ಅವರ 119ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಾದ್ಯಂತ ಬಾಬೂಜಿ ಎಂದೇ ಕರೆಯಲ್ಪಡುವ ಜಗಜೀವನರಾಂ ಅವರು ಧೀಮಂತ ರಾಷ್ಟ್ರೀಯ ನಾಯಕ, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯ ಹೋರಾಟಗಾರ ಹಾಗೂ ಅತ್ಯುತ್ತಮ ಸಂಸದೀಯ ಪಟುವಾಗಿದ್ದರು. 1971 ರಲ್ಲಿ ಭಾರತ-ಪಾಕ್ ಮಧ್ಯೆ ಯುದ್ಧ ನಡೆದಾಗ ಆಗ ಕೇಂದ್ರ ರಕ್ಷಣಾ ಸಚಿವರಾಗಿದ್ದ ಬಾಬೂಜಿ ಪಾಕಿಸ್ಥಾನಕ್ಕೆ ತಕ್ಕ ಶಾಸ್ತಿ ಕಲಿಸಿದ್ದರು.ಕೃಷಿ ಸಚಿವರಾಗಿದ್ದಾಗ ಭಾರತೀಯ ಕೃಷಿ ಆಧುನೀಕರಣಗೊಂಡಿತು ಮತ್ತು ಭಾರತದಲ್ಲಿ ಹಸಿರು ಕ್ರಾಂತಿ ನಡೆಯಿತು. ಹಸಿವು ಮುಕ್ತ ಭಾರತ ನಿರ್ಮಾಣ ಮಾಡುವಲ್ಲಿ ಬಾಬೂಜಿ ಕೊಡುಗೆ ಅಪಾರವಾಗಿದೆ’ ಎಂದು ಹೇಳಿದರು.

ಉಪನ್ಯಾಸಕ ನಾರಾಯಣ ಬೆಳಕುರ್ಕಿ ಮಾತನಾಡಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾ ಅಧ್ಯಕ್ಷ ಪಾಮಯ್ಯ ಮುರಾರಿ, ಎಪಿಎಂಸಿ ಅಧ್ಯಕ್ಷ ಅಮರೇಶ ಹಿರೇಹೆಸರೂರು, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಸಿದ್ಧರಾಮೇಶ ಪಾಗದ, ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ ಅಧ್ಯಕ್ಷ ವೆಂಕಟೇಶ ಗುತ್ತೇದಾರ, ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ, ತಹಶೀಲ್ದಾರ್ ಸತ್ಯಮ್ಮ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ, ಪಿಐ ಹೊಸಕೇರಪ್ಪ, ಸಮಾಜ ಕಲ್ಯಾಣಾಧಿಕಾರಿ ರವೀಂದ್ರ ಉಪ್ಪಾರ, ಸಿಡಿಪಿಒ ನಾಗರತ್ನ, ಬಿಇಒ ಸುಜಾರ ಹೂನೂರು, ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-32-553284788

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.