ಮುಂಬೈ:ಲಾಕ್‌ಡೌನ್ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಬಾಲಿವುಡ್ ನಟಿ ಪೂನಂ ಪಾಂಡೆ ವಿರುದ್ಧ ಮುಂಬೈನಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಕಾರಣವಿಲ್ಲದೆ ಮರೀನ್ ಡ್ರೈವ್‌ನಲ್ಲಿ ನಟಿ ಪೂನಂ ಪಾಂಡೆ ತಮ್ಮ ಹೈ-ಎಂಡ್ ಕಾರಿನಲ್ಲಿ ತಿರುಗಾಡುತ್ತಿರುವುದು ಕಂಡುಬಂದಿದೆ.

ಲಾಕ್‌ಡೌನ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಅವರು ಹಾಗೂ ಅವರ ಜೊತೆಗಿದ್ದ ವ್ಯಕ್ತಿಯ ಮೇಲೆ ಕೇಸು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೂನಂ ಜೊತೆಗಿದ್ದ ವ್ಯಕ್ತಿಯನ್ನು ಸ್ಯಾಮ್ ಅಹ್ಮದ್ ಬಾಂಬೆ (46) ಎಂದು ಗುರುತಿಸಲಾಗಿದೆ. ಅವರ ವಿರುದ್ದ ಸೆಕ್ಷನ್ 269 (ಜೀವಕ್ಕೆ ಅಪಾಯಕಾರಿ ಸೋಂಕು ಹರಡುವ ಕಾಯಿಲೆಯ ನಿರ್ಲಕ್ಷ್ಯ ಕಾಯ್ದೆ) ಮತ್ತು ಐಪಿಸಿ ಸೆಕ್ಷನ್ 188 (ಸರ್ಕಾರಿ ಅಧಿಕಾರಿಗಳಿಂದ ಘೋಷಿಸಲ್ಪಟ್ಟ ಆದೇಶಕ್ಕೆ ಅಸಹಕಾರ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಮೃತ್ಯುಂಜಯ್ ಹಿರೇಮಠ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.