ನವದೆಹಲಿ: ಆರೋಪಿಯೊಬ್ಬನ ಲಾಕಪ್ ಡೆತ್ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮಧ್ಯಪ್ರದೇಶದ ಇಬ್ಬರು ಪೊಲೀಸ್ ಅಧಿಕಾರಿಗಳ ಬಗ್ಗೆ ಮಾಹಿತಿ ನೀಡಿದವರಿಗೆ ಕೇಂದ್ರ ತನಿಖಾ ದಳ (ಸಿಬಿಐ) ₹2 ಲಕ್ಷ ಬಹುಮಾನ ಘೋಷಣೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯಪ್ರದೇಶದ ಗುಣಾ ಪ್ರದೇಶದ ಮೈನಾ ಪೊಲೀಸ್ ಠಾಣೆಯಲ್ಲಿದ್ದ ದೇವ ಪಾರ್ಧಿ ಎನ್ನುವ ಆರೋಪಿ ಕಸ್ಟಡಿಯಲ್ಲೇ ಮೃತಪಟ್ಟಿದ್ದನು.

ಘಟನೆ ಬಳಿಕ ಸಂಜಿತ್ ಸಿಂಗ್ ಮಾವಾಯಿ ಮತ್ತು ಉತ್ತಮ್ ಸಿಂಗ್ ಕುಶ್ವಾಹ ಎನ್ನುವ ಇಬ್ಬರು ಅಧಿಕಾರಿಗಳು ತಲೆಮರೆಸಿಕೊಂಡಿದ್ದಾರೆ.

ಕಳ್ಳತನ ಪ್ರಕರಣದಲ್ಲಿ ಪಾರ್ಧಿಯನ್ನು ಪೊಲೀಸರು ಬಂಧಿಸಿದ್ದರು. ಆದರೆ ಪೊಲೀಸ್ ಕಸ್ಟಡಿಯಲ್ಲಿರುವುವಾಗಲೇ ಆತ ಅನುಮಾನಾಸ್ಪದವಾಗಿ ಮೃತಪಟ್ಟಿದ್ದನು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಈಗಾಗಲೇ ಚಾರ್ಜ್ಶೀಟ್ ದಾಖಲಿಸಿದೆ.

ತಲೆಮರೆಸಿಕೊಂಡ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಲಾಗಿದ್ದು, ಅವರನ್ನು ಘೋಷಿತ ಅಪರಾಧಿಗಳು ಎಂದು ಹೆಸರಿಸಲಾಗಿದೆ ಎಂದು ಸಿಬಿಐ ವಕ್ತಾರರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.